ಬೆಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳ, ಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ ಮತ್ತು ಅವರ ಸಹೋದರ ಡಿ. ಹರ್ಷೇಂದ್ರ ಕುಮಾರ್ ಸೇರಿದಂತೆ ಹೆಗ್ಗಡೆ ಕುಟುಂಬದ ಸದಸ್ಯರ ವಿರುದ್ಧ ಅವಹೇಳನಕಾರಿ ವಿಡಿಯೋಗಳನ್ನು ಪ್ರಸಾರ ಮಾಡಿದ ಯೂಟ್ಯೂಬರ್ ಸಮೀರ್ ಸೇರಿ 10 ಮಂದಿಗೆ ಸೆಷನ್ಸ್ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಯೂಟ್ಯೂಬರ್‌ಗಳಾದ ಎಂ.ಡಿ. ಸಮೀರ್, ಈತನ ದೂತ ಸಮೀರ್ ಮತ್ತು ಸಮೀರ್ ಎಂ.ಡಿ. ಹಾರಾರ್ ಎಂಬ ಯೂಟ್ಯೂಬ್ ಚಾನೆಲ್‌ಗಳು, ಅಜಯ್ ಅಂಚನ್, ಕುಡ್ಲ ರಾಂಪೇಜ್ ಎಂಬ ಮೂರು ಯೂಟ್ಯೂಬ್ ಚಾನೆಲ್‌ಗಳು, ಗಿರೀಶ್ ಮಟ್ಟಣ್ಣನವರ್ ಮತ್ತು ಅಣ್ಣಬಾಂಡ್ ಶ್ರೀನಾಥ್ ಎಂಬುವವರಿಗೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ನೋಟಿಸ್‌ನಲ್ಲಿ, ಧರ್ಮಸ್ಥಳದ ಬಗ್ಗೆ ಸಮೀರ್ ಮಾಡಿರುವ ಎಐ (ಕೃತಕ ಬುದ್ಧಿಮತ್ತೆ) ವಿಡಿಯೋಗಳು ಹಾಗೂ ಕ್ಷೇತ್ರ, ಡಾ. ವೀರೇಂದ್ರ ಹೆಗ್ಗಡೆ ಮತ್ತು ಡಿ. ಹರ್ಷೇಂದ್ರ ಕುಮಾರ್ ಬಗ್ಗೆ ಇರುವ ಎಲ್ಲಾ ಅವಹೇಳನಕಾರಿ ಪೋಸ್ಟ್‌ಗಳನ್ನು ತಕ್ಷಣವೇ ಡಿಲೀಟ್ ಮಾಡಬೇಕು ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.
ತಮ್ಮ ಮತ್ತು ತಮ್ಮ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್‌ಗಳು ಮತ್ತು ವಿಡಿಯೋಗಳ ಕುರಿತು ಡಿ. ಹರ್ಷೇಂದ್ರ ಕುಮಾರ್ ಅವರು ಕೋರ್ಟ್‌ನಲ್ಲಿ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ಇದೀಗ 10 ಮಂದಿಗೆ ನೋಟಿಸ್ ಜಾರಿ ಮಾಡಿದೆ.