ಇದೀಗ ಬಂದ ಸುದ್ದಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಗೆ ಆಗ್ರಹಿಸಿ ಕಳೆದ ಒಂದು ತಿಂಗಳಿನಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಬೆಂಬಲಿಗರು ಮತ್ತು ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸುತ್ತಿದ್ದರು.

ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸ್ಥಾನದಿಂದ ತೆರವುಗೊಳಿಸುವವರೆಗೆ ಪ್ರತಿಭಟನಾಕಾರರು ಜಂತರ್ ಮಂತರ್‌ನಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಜೆಪಿ ಸ್ಪಷ್ಟಪಡಿಸಿತ್ತು. ಸಿಜೆಪಿ ನೇತೃತ್ವದ ಈ ಹೋರಾಟಕ್ಕೆ ಕಾಂಗ್ರೆಸ್ ಸೇರಿದಂತೆ ಹಲವು ವಿರೋಧ ಪಕ್ಷಗಳು ಬೆಂಬಲ ಸೂಚಿಸಿದ್ದವು.

Related Articles

ಇತ್ತೀಚಿನ ಸುದ್ದಿಗಳು