ನೀಟ್ ಅಕ್ರಮದ ಹೊಣೆ ಧರ್ಮೇಂದ್ರ ಪ್ರಧಾನ್ ನೀವೆ ಹೊರಬೇಕು – ಮಾಜಿ ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು : ನೀಟ್ ಪರೀಕ್ಷೆಗೆ (NEET UG) ಸಂಬಂಧಿಸಿದ ಅಕ್ರಮಗಳು ಹಾಗೂ ಅವುಗಳ ತನಿಖೆಯಲ್ಲಿನ ವಿಳಂಬದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah), ಕೇಂದ್ರ ಸರ್ಕಾರದ (Union government) ವಿರುದ್ಧ ಕಿಡಿಕಾರಿದ್ದಾರೆ. ಲಕ್ಷಾಂತರ ವಿದ್ಯಾರ್ಥಿಗಳು ವರ್ಷಗಳ ಪರಿಶ್ರಮ, ಕುಟುಂಬದ ತ್ಯಾಗ ಹಾಗೂ ಆರ್ಥಿಕ ಸಂಕಷ್ಟವನ್ನು ಎದುರಿಸಿ ನೀಟ್ ಪರೀಕ್ಷೆ ಬರೆಯುತ್ತಾರೆ. ಆದರೆ ಪರೀಕ್ಷೆಯಲ್ಲಿ ಉಂಟಾಗುವ ಪ್ರತಿಯೊಂದು ಅಕ್ರಮ ಮತ್ತು ಹೊಣೆಗಾರಿಕೆಯ ಕೊರತೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ದೊಡ್ಡ ಹೊಡೆತ ನೀಡುವುದರ ಜೊತೆಗೆ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಕುಗ್ಗಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ನೀಟ್ ವಿವಾದದಿಂದ ಹಲವರು ನಿರಾಸೆಗೆ ಒಳಗಾಗಿದ್ದು, ಕೆಲ ವಿದ್ಯಾರ್ಥಿಗಳು ಜೀವ ಕಳೆದುಕೊಂಡಿರುವ ವರದಿಗಳು ಮನಕಲಕುವಂತಿವೆ. ಇಂತಹ ಸಂದರ್ಭದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಅಲ್ಲದೆ, ಪ್ರಕರಣದ ಬಗ್ಗೆ ಪಾರದರ್ಶಕ ಹಾಗೂ ನಿಗದಿತ ಅವಧಿಯೊಳಗಿನ ತನಿಖೆ ನಡೆಸಿ ಪ್ರತಿಯೊಬ್ಬ ಸಂತ್ರಸ್ತ ವಿದ್ಯಾರ್ಥಿಗೂ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳ ವಿಶ್ವಾಸಕ್ಕೆ ಧಕ್ಕೆಯಾದ ಬಗ್ಗೆ ಕ್ಷಮೆಯಾಚಿಸಬೇಕು. ಮುಂದಿನ ದಿನಗಳಲ್ಲಿ ಅರ್ಹತೆಯ ಆಧಾರದ ಮೇಲೆಯೇ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ ಎಂಬ ಭರವಸೆಯನ್ನು ನೀಡಬೇಕು ಎಂದು ಅವರು ಹೇಳಿದ್ದಾರೆ. ಜೊತೆಗೆ, ನೀಟ್ ಅಭ್ಯರ್ಥಿಗಳ ಬೆಂಬಲಕ್ಕೆ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಹಾಗೂ ಯುವಕರು ಒಂದಾಗುವಂತೆ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು