ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗೆ ನೇಮಿಸಿರುವ ಶಿಕ್ಷಕರು, ಸಿಬ್ಬಂದಿ ಮತ್ತು ಅಧಿಕಾರಿಗಳು ಗೈರಾದರೆ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಒಂದು ಕಡೆ ತಾಂತ್ರಿಕ ಸಮಸ್ಯೆ ಮತ್ತೊಂದು ಕಡೆ ನೆಟ್ವರ್ಕ್ ಸಮಸ್ಯೆ ನಡುವೆ ಸಮೀಕ್ಷೆ ನಡೆಸುತ್ತಿರುವ ಶಿಕ್ಷಕರಿಗೆ ಹೊಸ ತಲೆಬಿಸಿ ಎದುರಾಗಿದೆ.
ಇತ್ತ ಸರ್ವರ್ ಇಲ್ಲ, ಮೊಬೈಲಲ್ಲಿ ತಾಂತ್ರಿಕ ದೋಷಗಳು ಇವೆ ಎಂದು ಶಿಕ್ಷಕರು ಈ ಒಂದು ಜಾತಿಗಣತಿ ಸಮೀಕ್ಷೆ ಮುಂದೂಡುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದರೆ, ಇನ್ನೊಂದೆಡೆ ಸಮೀಕ್ಷೆಗೆ ಗೈರಾದ ಸಿಬ್ಬಂದಿ ಮತ್ತು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸಂಪುಟ ಮುಂದಾಗಿದ್ದರ ಬಗ್ಗೆ ಶಿಕ್ಷಕರು ಅಸಮಾಧಾನ ಹೊರಹಾಕಿದ್ದಾರೆ.
ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗೆ ರಾಜ್ಯದಲ್ಲಿ ಸರ್ಕಾರಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಆದರೆ ಸಮೀಕ್ಷೆ ಆರಂಭದ ದಿನವೇ ನೂರಾರು ಸಮಸ್ಯೆಗಳು ಎದುರಾಗಿದ್ದು ಸರ್ವ ಸಮಸ್ಯೆ ಹಾಗೂ ಮೊಬೈಲ್ನಲ್ಲಿ ತಾಂತ್ರಿಕ ದೋಷಗಳಿಂದ ಸಮೀಕ್ಷೆ ನಡೆಸುವುದು ಕಷ್ಟವಾಗಿದೆ.