ಡಿಜಿಟಲ್ ಸಿಗ್ನೇಚರ್ ಬಳಸಿ ಪತ್ರಗಳನ್ನು ವಿಲೇವಾರಿ ಮಾಡಿ – ಬಸವರಾಜ ರಾಯರೆಡ್ಡಿ

ಕೊಪ್ಪಳ: ಇಸ್ಲಾಂ ಧರ್ಮ ಎಲ್ಲಕ್ಕಿಂತ ಶ್ರೇಷ್ಠ ಧರ್ಮ ಎಂದು ಹೇಳಿ ಇತ್ತೀಚೆಗೆ ತೀವ್ರ ವಿವಾದಕ್ಕೊಳಗಾಗಿದ್ದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಮತ್ತೊಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗುನ್ನಾಳ ಗ್ರಾಮದಲ್ಲಿ ನಡೆದ ಪದವಿಪೂರ್ವ ಕಾಲೇಜು ಉದ್ಘಾಟನಾ ಸಮಾರಂಭದಲ್ಲಿ ಅಧಿಕಾರಿಗಳ ಬಗ್ಗೆ ಮಾತನಾಡಿದ್ದು ಅತಿರೇಕವೆನಿಸಿದೆ.

ಡಿಜಿಟಲ್ ಸಿಗ್ನೇಚರ್ ಬಳಸಿ ಪತ್ರಗಳನ್ನು ವಿಲೇವಾರಿ ಮಾಡಿ

ಯಾವ ಅಧಿಕಾರಿ ಮಾತು ಕೇಳುವುದಿಲ್ಲವೋ ಹೇಳಿ, ಅಂತಹ ಮಾತು ಕೇಳದ ಅಧಿಕಾರಿಗಳನ್ನು ಫೈರ್ ಮಾಡುತ್ತೇನೆ ಎಂದ ಸಚಿವರು ಯಲಬುರ್ಗಾ ತಹಶೀಲ್ದಾರ್ ಪ್ರಕಾಶ್ ನಾಶಿ ಅವರನ್ನು ವೇದಿಕೆಯಲ್ಲೇ ಹೆಸರು ಹೇಳಿ, ನಾನು ಸಚಿವ ಸ್ಥಾನದ ಕಾರ್ಯಭಾರದಲ್ಲಿ ಸಂಪೂರ್ಣ ಬ್ಯುಸಿಯಾಗಿರುತ್ತೇನೆ. ಹೀಗಾಗಿ ನೀವೇ ನನ್ನ ಪಿಆರ್‌ಒ ಆಗಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು. ತಮ್ಮ ಪಿಎಗೆ ಡಿಜಿಟಲ್ ಸಿಗ್ನೇಚರ್ ಬಳಸಿ ಪತ್ರಗಳನ್ನು ವಿಲೇವಾರಿ ಮಾಡುವಂತೆ ಹೇಳಿರುವುದಾಗಿ ತಿಳಿಸಿದರು.

Related Articles

ಇತ್ತೀಚಿನ ಸುದ್ದಿಗಳು