Monday, February 9, 2026

ಸತ್ಯ | ನ್ಯಾಯ |ಧರ್ಮ

ಜೆಡಿಎಸ್–ಬಿಜೆಪಿ ಮೈತ್ರಿಗೆ ಹಾಸನದಲ್ಲಿ ಅಸಮಾಧಾನ ಪರೋಕ್ಷವಾಗಿ ವಿರೋಧ – ಪ್ರೀತಂ ಜೆ. ಗೌಡ

ಹಾಸನ: ರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮುಂದುವರಿಸುವ ವಿಚಾರಕ್ಕೆ ಸಂಬಂಧಿಸಿ ಹಾಸನ ಜಿಲ್ಲೆಯಲ್ಲಿ ಪಕ್ಷದ ಅಸಮಾಧಾನ ಬಹಿರಂಗವಾಗಿದೆ. ಮಾಜಿ ಶಾಸಕ ಪ್ರೀತಂ ಜೆ. ಗೌಡ ಅವರು ಜೆಡಿಎಸ್–ಬಿಜೆಪಿ ಮೈತ್ರಿಗೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ಶನಿವಾರ ನಡೆದ ಹಾಸನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಮುಖಂಡರ ಸಭೆ ನಡೆಸಿದರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಯಾವ ರೀತಿಯಲ್ಲಿ ಎದುರಿಸಬೇಕು ಎಂಬ ಕುರಿತು ಚರ್ಚೆ ನಡೆಸುವಂತೆ, ಅಭಿಪ್ರಾಯಗಳನ್ನು ಸಂಗ್ರಹಿಸಲಾಗಿದೆ. ಜಿಲ್ಲೆಯಲ್ಲಿ ಬಿಜೆಪಿ ಪ್ರಬಲ ರಾಜಕೀಯ ಪಕ್ಷವಾಗಿ ಕಾರ್ಯನಿರ್ವಹಿಸುತ್ತಿದೆ, ಮುಂದಿನ ದಿನಗಳಲ್ಲಿ ಎಲ್ಲಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಿಲ್ಲೆ ಪಂಚಾಯಿತಿ ಕ್ಷೇತ್ರಗಳಲ್ಲಿ ನಡೆಸುವ ಮೂಲಕ ಪಕ್ಷ ಸಂಘಟನೆಗೆ ಒತ್ತು ನೀಡಲಾಯಿತು ಎಂದು ಸಭೆ ನಡೆಸಿದರು.

ಸ್ಥಳೀಯ ಸಂಸ್ಥೆ ಜೆಡಿಎಸ್ ಜೊತೆಗೆ ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಪ್ರೀತಂಗೌಡ, ಜಿಲ್ಲೆಯ ಬಿಜೆಪಿ ನಾಯಕರಲ್ಲಿ ಸ್ಪಷ್ಟತೆ ಇದ್ದರೂ, ರಾಷ್ಟ್ರೀಯ ನಾಯಕರ ತೀರ್ಮಾನದಂತೆ ಮೈತ್ರಿಯಲ್ಲಿ ಯಾವುದೇ ಒಡಕು ಬಾರದಂತೆ ನಡೆದುಕೊಳ್ಳಬೇಕು ಎಂದು ಹೇಳಿದರು. ಆದರೆ ಜಿಲ್ಲೆಯಲ್ಲಿ ಬಿಜೆಪಿ ಸ್ವಂತ ಶಕ್ತಿಯ ಮೇಲೆ ಚುನಾವಣೆ ಎದುರಿಸಬೇಕು ಎಂಬುದು ಕಾರ್ಯನಿರತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಪಕ್ಷದ ಕಾರ್ಯಕರ್ತರ ಅವಕಾಶಗಳಿಂದ ವಂಚಿತರಾಗುವ ಆತಂಕವಿದ್ದು, ಇದು ವಿರೋಧ ಪಕ್ಷಗಳಿಗೆ ಲಾಭವಾಗುವ ಸಾಧ್ಯತೆ ಇದೆ ಅವರು ಹೇಳಿದರು.

ಜಿಲ್ಲೆಯಲ್ಲಿ ಮೂರು–ಕು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಬಲಿಷ್ಠವಾಗಿದ್ದು, ಸ್ವಂತ ಶಕ್ತಿಯ ಮೇಲೆ ಚುನಾವಣೆ ಎದುರಿಸಿದರೆ ಅಧಿಕಾರ ಹಿಡಿಯಲು ಸಾಧ್ಯ ಅನುಕೂಲವಾಗುವಂತೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ವಿಚಾರ ರಾಷ್ಟ್ರೀಯ ನಾಯಕರ ಗಮನಕ್ಕೆ ತರಲಾಗುವುದು ಎಂದು ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page