Thursday, December 26, 2024

ಸತ್ಯ | ನ್ಯಾಯ |ಧರ್ಮ

ಡಿ.27 ರಂದು ಪತ್ರಕರ್ತರಿಗೆ ವಿಮೆ ಬಾಂಡ್ ವಿತರಣೆ – ಕೆ.ಹೆಚ್. ವೇಣುಕುಮಾರ್

ಹಾಸನ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಕರ್ತರ ಸುರಕ್ಷತೆಗಾಗಿ ಮೊದಲ ಬಾರಿಗೆ ಮಾಡಿಸಿರುವ ವಿಮಾ ಬಾಂಡ್ ವಿತರಣೆ ಹಾಗೂ ಸುವರ್ಣ ಮಹೋತ್ಸವ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕರಿಗೆ ಸನ್ಮಾನ ಕಾರ್ಯಕ್ರಮ ಡಿಸೆಂಬರ್ 27ರ ಶುಕ್ರವಾರ ಬೆಳಿಗ್ಗೆ 10:30ಕ್ಕೆ ನಡೆಯಲಿದೆ ಎಂದು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಹೆಚ್. ವೇಣುಕುಮಾರ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಗುರುವಾರದಂದು ಮಾತನಾಡುತ್ತಾ, ನಗರದ ಎಂ.ಜಿ. ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಶುಕ್ರವಾರ ಬೆಳಗ್ಗೆ 10.30 ಗಂಟೆಗೆ ಕಾರ್ಯಕ್ರಮ ಶುರುವಾಗಲಿದ್ದು, ಅಂದೇ ಸಂಘದಿAದ ಹೊರ ತಂದಿರುವ 2025ನೇ ಸಾಲಿನ ಕ್ಯಾಲೆಂಡರ್ ಬಿಡಗಡೆ ಮಾಡಲಾಗುವುದು ಕಾರ್ಯಕ್ರಮದ ಪಾವನ ಸಾನಿಧ್ಯವನ್ನು ಹಾರನಹಳ್ಳಿ ಕೋಡಿಮಠದ ಡಾ. ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ವಹಿಸುವರು. ಜಿಲ್ಲಾಧಿಕಾರಿ ಸಿ.ಸತ್ಯಭಾಮ ಉದ್ಘಾಟನೆ ನೆರವೇರಿಸುವರು. ಕೆಯೂಡಬ್ಲೂಜೆ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಹೆಚ್.ಬಿ.ಮದನಗೌಡ ಪ್ರಾಸ್ತಾವಿಕ ನುಡಿಗಳನ್ನಾಡುವರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಟಿ.ವಿ.ಶಿವಾನಂದ ತಗಡೂರು ದಿಕ್ಸೂಚಿ ಮಾತುಗಳನ್ನಾಡುವರು ಎಂದರು. ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಹೆಚ್.ವೇಣುಕುಮಾರ್ ಅಧ್ಯಕ್ಷತೆವಹಿಸಲಿದ್ದು, ರಾಜ್ಯ ಕಾರ್ಯಕಾರಿ ಸಮಿತಿ ವಿಶೇಷ ಆಹ್ವಾನಿತರಾದ ರವಿ ನಾಕಲಗೂಡು ಆಶಯನುಡಿಗಳನ್ನಾಡುವರು. ಜಿಲ್ಲೆಯ ಎಲ್ಲಾ ಶಾಸಕರು, ಸಂಸದರು, ಎಸ್ಪಿ ಮೊಹಮದ್ ಸುಜೀತಾ, ಜಿಪಂ ಸಿಇಒ ಪೂರ್ಣಿಮಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ನಿರ್ದೇಶಕರಾದ ಮೀನಾಕ್ಷಮ್ಮ ಮೊದಲಾದವರು ಭಾಗಿಯಾಗುವರು ಎಂದು ವಿವರಿಸಿದರು. ವಿಮಾಬಾಂಡ್ ವಿತರಣೆ ನಂತರ ಈ ಬಾರಿಯ ಸುವರ್ಣ ಮಹೋತ್ಸವ ಪ್ರಶಸ್ತಿ ಪುರಸ್ಕತರಾದ ಹೆಚ್.ಬಿ.ಮದನಗೌಡರನ್ನು ಸಂಘದ ಪರವಾಗಿ ಅಭಿನಂದಿಸಲಾಗುವುದು ತಿಳಿಸಿದರು.
ನಗರ ಹಾಗೂ ಜಿಲ್ಲಾದ್ಯಂತ ನಮ್ಮ ಸಂಘದ ಸದಸ್ಯರಾಗಿರುವ ಒಟ್ಟು 360 ಸದಸ್ಯರ ಪೈಕಿ 280 ಮಂದಿ ಆರೋಗ್ಯ ವಿಮೆ ಮಾಡಿಸಿಕೊಂಡಿದ್ದು, ಅವರೆಲ್ಲರಿಗೂ ಬಾಂಡ್ ವಿತರಿಸಲಾಗುವುದು. ಉಳಿದವರಿಗೂ ಮುಂದಿನ ದಿನಗಳಲ್ಲಿ ವಿಮೆ ಮಾಡಿಸಲು ಪ್ರಯತ್ನಿಸಲಾಗುವುದು.. ಹಾಗೆಯೇ ಪತ್ರಕರ್ತರು ಹಾಗೂ ಅವರ ಕುಟುಂಬದವರಿಗೆ ಮುಂದಿನ ದಿನಗಳಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗುವುದು ಎಂದು ಎಂದು ಹೇಳಿದರು. ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿ ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಸಿ.ಶಶಿಧರ್ ಇತರರು ಉಪಸ್ಥಿತರಿದ್ರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page