Thursday, September 18, 2025

ಸತ್ಯ | ನ್ಯಾಯ |ಧರ್ಮ

ಹಾಸನಾಂಬ ಜಾತ್ರೋತ್ಸಕ್ಕೆ ಸಿ.ಎಂ ಸಿದ್ದರಾಮಯ್ಯ ಡಿಸಿಎಂಗೆ ಜಿಲ್ಲಾಡಳಿತದಿಂದ ಆಹ್ವಾನ

ಹಾಸನ : ನಗರದ ಅಧಿದೇವತೆ ಹಾಸನಾಂಬ ದರ್ಶನೋತ್ಸವದಲ್ಲಿ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಇಂದು ಜಿಲ್ಲಾಡಳಿತದಿಂದ ಆಹ್ವಾನ ನೀಡಲಾಯಿತು.

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಸಂಸದ ಶ್ರೇಯಸ್ ಪಟೇಲ್, ಶಾಸಕ ಕೆ.ಎಂ.ಶಿವಲಿಂಗೇಗೌಡ, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ದೇವಾಲಯದ ಆಡಳಿತಾಧಿಕಾರಿ ಮಾರುತಿ ಅವರು ಜಿಲ್ಲಾಡಳಿತದ ಪರವಾಗಿ ಅಧಿಕೃತ ಆಹ್ವಾನ ನೀಡಿದರು.

ನಾಡಿನ ಪ್ರಸಿದ್ಧ ಹಾಸನಾಂಬ ಜಾತ್ರಾಮಹೋತ್ಸವವು ಅಕ್ಟೋಬರ್ 9ರಿಂದ 23ರವರೆಗೆ ಹಾಸನದಲ್ಲಿ ಜರುಗಲಿದ್ದು, ಅದ್ಧೂರಿ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page