Home ಬ್ರೇಕಿಂಗ್ ಸುದ್ದಿ ಹಾಸನಾಂಬ ಜಾತ್ರೋತ್ಸವಕ್ಕೆ ಕೃಷ್ಣ ಬೈರೇಗೌಡರಿಗೆ ಜಿಲ್ಲಾಡಳಿತದಿಂದ ಆಹ್ವಾನ

ಹಾಸನಾಂಬ ಜಾತ್ರೋತ್ಸವಕ್ಕೆ ಕೃಷ್ಣ ಬೈರೇಗೌಡರಿಗೆ ಜಿಲ್ಲಾಡಳಿತದಿಂದ ಆಹ್ವಾನ

0

ಹಾಸನ : ನಗರದ ಅಧಿದೇವತೆ ಹಾಸನಾಂಬ ದರ್ಶನೋತ್ಸವದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅವರಿಗೆ ಇಂದು ಜಿಲ್ಲಾಡಳಿತದಿಂದ ಆಹ್ವಾನ ನೀಡಲಾಯಿತು.

ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಸಂಸದ ಶ್ರೇಯಸ್ ಪಟೇಲ್, ಶಾಸಕ ಕೆ.ಎಂ.ಶಿವಲಿಂಗೇಗೌಡ, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ದೇವಾಲಯದ ಆಡಳಿತಾಧಿಕಾರಿ ಮಾರುತಿ ಅವರು ಜಿಲ್ಲಾಡಳಿತದ ಪರವಾಗಿ ಅಧಿಕೃತ ಆಹ್ವಾನ ಹಸ್ತಾಂತರಿಸಿದರು.

ನಾಡಿನ ಪ್ರಸಿದ್ಧ ಹಾಸನಾಂಬ ಜಾತ್ರಾಮಹೋತ್ಸವವು ಅಕ್ಟೋಬರ್ 9ರಿಂದ 23ರವರೆಗೆ ಹಾಸನದಲ್ಲಿ ಜರುಗಲಿದ್ದು, ಅದ್ಧೂರಿ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

You cannot copy content of this page

Exit mobile version