ಬೆಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಹುಬ್ಬಳ್ಳಿಯ ಜಬ್ಬಾರ್ ಖಾನ್ ಹೊನ್ನಳ್ಳಿ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಎಸ್ ಎಂ ಕೃಷ್ಣ ಅವರ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಆಗಿದ್ದ ಜಬ್ಬಾರ್ ಖಾನ್ ಅವರು ಅನೇಕ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಅಕ್ಷರ ಸೇವೆ ಮಾಡಿದ್ದಾರೆ. ಸರಳ, ಸಜ್ಜನ, ಮಿತಭಾಷಿ ಆಗಿದ್ದ ಅವರ ಅಗಲಿಕೆ ನೋವು ತಂದಿದೆ ಎಂದು ಶಿವಕುಮಾರ್ ತಿಳಿಸಿದ್ದಾರೆ.
ಜಬ್ಬಾರ್ ಖಾನ್ ಹೊನ್ನಳ್ಳಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿ ಕುಟುಂಬ ಸದಸ್ಯರು, ಬಂಧುಗಳು, ಅಭಿಮಾನಿಗಳಿಗೆ ಸಿಗಲಿ ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.