Home ಬೆಂಗಳೂರು ಆರೋಪ ಮಾಡುವುದು ಬಿಜೆಪಿಯವರ ಚಾಳಿ, ಮತದಾರರ ಹಕ್ಕುಗಳನ್ನು ಕಾಪಾಡುವುದು ನಮ್ಮ ಜವಾಬ್ದಾರಿ: ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಆರೋಪ ಮಾಡುವುದು ಬಿಜೆಪಿಯವರ ಚಾಳಿ, ಮತದಾರರ ಹಕ್ಕುಗಳನ್ನು ಕಾಪಾಡುವುದು ನಮ್ಮ ಜವಾಬ್ದಾರಿ: ಮುಖ್ಯಮಂತ್ರಿ ಡಿಕೆ ಶಿವಕುಮಾರ್

0

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಕುರಿತು ನಮ್ಮದೂ ಆಕ್ಷೇಪವಿದ್ದು, ಅದನ್ನು ಸೂಕ್ತ ವೇದಿಕೆಯಲ್ಲಿ ನ್ಯಾಯಬದ್ಧವಾಗಿ ಪ್ರತಿಭಟಿಸುತ್ತೇವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸದಾಶಿವನಗರದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಭಟನೆಯ ನಡುವೆಯೂ ಜನರ ಮತದಾನದ ಹಕ್ಕನ್ನು ರಕ್ಷಿಸುವುದು ನಮ್ಮ ಜವಾಬ್ದಾರಿಯಾಗಿದ್ದು, ಸರ್ಕಾರದಿಂದ ಎಲ್ಲರಿಗೂ ನ್ಯಾಯ ಒದಗಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ಎಸ್‌ಐಆರ್ ಪ್ರಕ್ರಿಯೆಯನ್ನು ಮನೆ ಮನೆಗೆ ಹೋಗಿ ನಡೆಸುತ್ತಿಲ್ಲ ಎಂಬ ವಿರೋಧ ಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ ಅವರು, “ಆರೋಪ ಮಾಡುವುದೇ ವಿರೋಧ ಪಕ್ಷಗಳ ಕೆಲಸ, ಆದರೆ ಜನರ ಹಕ್ಕು ಉಳಿಸುವುದು ನಮ್ಮ ಕರ್ತವ್ಯ” ಎಂದರು. ಇದೇ ವೇಳೆ ಸಚಿವ ಸಂಪುಟ ವಿಸ್ತರಣೆಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಲು ಸಿಎಂ ನಿರಾಕರಿಸಿದರು.

You cannot copy content of this page

Exit mobile version