Tuesday, September 2, 2025

ಸತ್ಯ | ನ್ಯಾಯ |ಧರ್ಮ

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಜೆಪಿಯೊಂದಿಗೆ ಸರ್ಕಾರ ರಚಿಸಲು ಉತ್ಸುಕರಾಗಿದ್ದರು: ‌ಯತ್ನಾಳ್

ಕಲಬುರಗಿ: ಒಂದು ಆಘಾತಕಾರಿ ಹೇಳಿಕೆಯಲ್ಲಿ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಒಂದು ಕಾಲು ಕಾಂಗ್ರೆಸ್‌ನ ಹೊರಗಿದೆ ಮತ್ತು ಅವರು ಬಿಜೆಪಿಯ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ಸರ್ಕಾರ ರಚಿಸಲು ರಹಸ್ಯ ಒಪ್ಪಂದ ಮಾಡಿಕೊಂಡಿದ್ದರು ಎಂದು ಹೇಳಿದ್ದಾರೆ.

“ಶಿವಕುಮಾರ್ ಮತ್ತು ವಿಜಯೇಂದ್ರ ಅವರು ದೆಹಲಿಯಲ್ಲಿ ಭೇಟಿಯಾಗಿ ರಹಸ್ಯ ಒಪ್ಪಂದ ಮಾಡಿಕೊಂಡಿದ್ದರು. ಅದರ ಪ್ರಕಾರ, ಶಿವಕುಮಾರ್‌ ಅವರು 60-70 ಕಾಂಗ್ರೆಸ್ ಶಾಸಕರ ಬೆಂಬಲ ಪಡೆಯಲು ಯಶಸ್ವಿಯಾದರೆ, ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಮತ್ತು ವಿಜಯೇಂದ್ರ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಬೇಕು. ಆದರೆ, ಹೆಚ್ಚು ಕಾಂಗ್ರೆಸ್ ಶಾಸಕರು ಶಿವಕುಮಾರ್ ಅವರೊಂದಿಗೆ ಇರದ ಕಾರಣ ಈ ಯೋಜನೆ ವಿಫಲವಾಯಿತು” ಎಂದು ಯತ್ನಾಳ್ ಸುದ್ದಿಗಾರರಿಗೆ ತಿಳಿಸಿದರು.

“ದೆಹಲಿಯಲ್ಲಿ ನಡೆದ ಸಭೆಯಲ್ಲಿ, ಶಿವಕುಮಾರ್ ಅವರು 60-70 ಕಾಂಗ್ರೆಸ್ ಶಾಸಕರ ಬೆಂಬಲ ತಮ್ಮಗಿದೆ ಎಂದು ಹೇಳಿಕೊಂಡಿದ್ದಾರೆ. ಆದರೆ, ಬಿಜೆಪಿ ನಾಯಕತ್ವವು ಆಂತರಿಕ ವರದಿಯ ಮೂಲಕ ಅವರ (ಡಿ.ಕೆ.ಎಸ್.) ಬೆಂಬಲಕ್ಕೆ 13 ಶಾಸಕರು ಸಹ ಇಲ್ಲ ಎನ್ನುವುದನ್ನು ತಿಳಿದುಕೊಂಡಿತು” ಎಂದು ಯತ್ನಾಳ್ ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page