ಡಿಕೆ ಶಿವಕುಮಾರ್ ವಿರುದ್ಧ ‘ಆದಾಯ ಮೀರಿ ಆಸ್ತಿ ಗಳಿಕೆ’ ಪ್ರಕರಣ: ಸು‌‌.ಕೋರ್ಟ್ ನಲ್ಲಿ ಇಂದು ವಿಚಾರಣೆ

ಡಿ.ಕೆ.ಶಿವಕುಮಾರ್‌ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅರ್ಜಿ ವಿಚಾರಣೆ ನಡೆಯಲಿದ್ದು, ಪ್ರಕರಣದ ಮರುಜೀವ ಪಡೆಯಲಿದೆಯೇ ಅಥವಾ ಅರ್ಜಿ ವಜಾಗೊಳ್ಳಲಿದೆಯೇ ಎಂದು ಇಂದು ನಿರ್ಧಾರವಾಗಲಿದೆ.

ಡಿಕೆಶಿ ಮೇಲಿನ ಸಿಬಿಐ ತನಿಖೆಯನ್ನು ರಾಜ್ಯ ಸರ್ಕಾರ ವಾಪಸ್‌ ಪಡೆದಿತ್ತು. ಸರ್ಕಾರದ ನಿರ್ಧಾರ ಪ್ರಶ್ನಿಸಿ ಯತ್ನಾಳ್‌ ಹಾಗೂ ಸಿಬಿಐ ಇಬ್ಬರೂ ಹೈಕೋರ್ಟ್‌ ಮೊರೆ ಹೋಗಿದ್ದರು. ಆದರೆ, ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿತ್ತು.

ಆ ನಂತರ ಅರ್ಜಿಯನ್ನು ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದು ಡಿಸೆಂಬರ್ 16 ರಂದು ಸುಪ್ರೀಂ ಕೋರ್ಟ್‌, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅರ್ಜಿ ವಿಚಾರಣೆ ನಡೆಸಿತು. ವಿಚಾರಣೆ ವೇಳೆ, ಕೌಂಟರ್‌ ಅಫಿಡವಿಟ್‌ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚಿಸಿದ್ದು, ಜನವರಿ 22 ಕ್ಕೆ ವಿಚಾರಣೆ ಮುಂದೂಡಲಾಗಿತ್ತು.

ಶಾಸಕ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿರುವುದನ್ನು ಹಿಂಪಡೆದಿದ್ದನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ನಡೆಯಲಿದೆ.

Related Articles

ಇತ್ತೀಚಿನ ಸುದ್ದಿಗಳು