Thursday, June 13, 2024

ಸತ್ಯ | ನ್ಯಾಯ |ಧರ್ಮ

ಡಿಕೆಶಿ – ಕಟ್ಟಾ ಭೇಟಿ ; ಆಪರೇಷನ್ ಹಸ್ತಕ್ಕೆ ಮತ್ತೊಂದು ಸೇರ್ಪಡೆ!?

‘ಆಪರೇಷನ್ ಹಸ್ತ’ದ ಚರ್ಚೆ ಬಿಸಿಯಲ್ಲಿರುವಾಗಲೇ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಬಿಜೆಪಿ ಹಿರಿಯ ನಾಯಕ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ ಕುತೂಹಲ ಮೂಡಿಸಿದ್ದಾರೆ.

ಇಂದು ಸಂಜೆ ಕೆಪಿಸಿಸಿ ಕಚೇರಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕೆಲವು ನಾಯಕರ ಕಾಂಗ್ರೆಸ್ ಪಕ್ಷ ಸೇರ್ಪಡೆ ಹಿನ್ನೆಲೆಯಲ್ಲಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ಭೇಟಿ ಹೆಚ್ಚು ಮಹತ್ವ ಪಡೆದುಕೊಂಡಿದೆ. ಹಲವು ಸಮಯಗಳಿಂದ ಬಿಜೆಪಿ ಪಕ್ಷದಲ್ಲೇ ಹೆಸರಿಲ್ಲದಂತೆ ಮೂಲೆಗುಂಪಾಗಿದ್ದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ಡಿಕೆಶಿವಕುಮಾರ್ ಭೇಟಿ ಹೆಚ್ಚು ಚರ್ಚಿತ ವಿಚಾರವಾಗಿದೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಬಿಜೆಪಿ ನಾಯಕ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಕೆಲಕಾಲ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದು, ನಾಯ್ಡು ಅವರು ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ. ಸ್ವತಃ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೂಡಾ ಡಿ.ಕೆ.ಶಿವಕುಮಾರ್ ಅವರ ಕೈಯಲ್ಲಿ ಇರುವುದರಿಂದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ.

Related Articles

ಇತ್ತೀಚಿನ ಸುದ್ದಿಗಳು