Wednesday, March 11, 2026

ಸತ್ಯ | ನ್ಯಾಯ |ಧರ್ಮ

ಅಜ್ಜನ ಹೆಸರಿನಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆಶಿ

ಕರ್ನಾಟಕದ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ರಾಜ್ಯದ ನೂತನ ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್‌ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದ್ದಾರೆ.

ರಾಜ್ಯದ ನೂತನ ಹಾಗೂ ಏಕೈಕ ಉಪಮುಖ್ಯಂತ್ರಿಯಾಗಿರುವ ಡಿಕೆ ಶಿವಕುಮಾರ್‌ ಅವರು, ತನ್ನ ಅಜ್ಜ ಗಂಗಾಧರ ಅವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದ್ದಾರೆ.

ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೆಲ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು, ಪುದುಚೆರಿ ಮುಖ್ಯಮಂತ್ರಿ ಎನ್‌. ರಂಗಸ್ವಾಮಿ ಸೇರಿದಂತೆ ಹಲವು ಭಾಗವಹಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page