ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಚಿವರು, ಕಾಂಗ್ರೆಸ್ ಶಾಸಕರು ಹಾಗೂ ವಿವಿಧ ಪದಾಧಿಕಾರಿಗಳಿಗೆ ಡಿನ್ನರ್ ಪಾರ್ಟಿ ಆಯೋಜಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಈ ಡಿನ್ನರ್ ಪಾರ್ಟಿ ನಡೆಯಲಿದ್ದು ಯಾವ್ಯಾವ ಸಚಿವ ಶಾಸಕರು ಭಾಗಿ ಆಗಲಿದ್ದಾರೆ ಎಂಬ ಕುತೂಹಲ ಮೂಡಿಸಿದೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಇಂದು ಔತಣಕೂಟ ನಡೆಯಲಿದೆ. ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಡಿಕೆಶಿ ಡಿನ್ನರ್ ಪಾರ್ಟಿ ಆಯೋಜಿಸಿದ್ದು, ಬಹಳ ಮಹತ್ವ ಪಡೆದಿದೆ.
ಇದು ನನ್ನ ಬದುಕಿನ ಮಹತ್ವದ ಕ್ಷಣ! ಕೆಪಿಸಿಸಿ ಅಧ್ಯಕ್ಷನಾಗಿ 5 ವರ್ಷಗಳು ತುಂಬಿದೆ. ಈ ಸುಧೀರ್ಘ ಪ್ರಯಾಣದಲ್ಲಿ ಜೊತೆಯಾದ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು. ನಿಮ್ಮ ಪ್ರೀತಿಗೆ ನಾನೆಂದಿಗೂ ಚಿರಋಣಿ. ಈ 5 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷವು ಒಗ್ಗಟ್ಟಾಗಿ ಇಟ್ಟ ಹೆಜ್ಜೆಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ಈಗಾಗಲೇ ಡಿಕೆ ಶಿವಕುಮಾರ್ ಅಧಿಕಾರದ ಬಗ್ಗೆ ಅಸಮಾಧಾನ ಎತ್ತಿರುವ ಹಲವು ಶಾಸಕರು, ಸಚಿವರುಗಳು ಈ ಸಭೆಗೆ ಗೈರಾದರೆ ಮತ್ತೆ ಅಸಮಾಧಾನ ಎಂಬ ಬೂದಿ ಮುಚ್ಚಿದ ಕೆಂಡದಿಂದ ಹೊಗೆ ಆಡಲಿದೆ. ಈಗಾಗಲೇ ಸಚಿವ ರಾಜಣ್ಣ ದೆಹಲಿ ಭೇಟಿ ನಂತರ ಪಕ್ಷದಲ್ಲಿ ಏನೋ ಬದಲಾವಣೆ ಇದೆ ಎಂಬ ಸೂಚನೆ ಹಿನ್ನೆಲೆಯಲ್ಲಿ ಈ ದಿನದ ಡಿನ್ನರ್ ಪಾರ್ಟಿ ಹಲವು ಮಹತ್ವ ಪಡೆದುಕೊಳ್ಳಲಿದೆ.