ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವಂತೆಯೇ ತಮಿಳುನಾಡಿನ ಹಲವು ಕಡೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಹಗರಣಗಳ ಪೋಸ್ಟರ್‌ಗಳು ರಾರಾಜಿಸುತ್ತಿವೆ.
ಪೋಸ್ಟರ್‌ಗಳ ಮೇಲ್ಭಾಗದಲ್ಲಿ “ಜಿ ಪೇ” ಎಂದು ಬರೆಯಲಾಗಿದ್ದು, ಅದರ ಮೇಲೆ ಪ್ರಧಾನಿ ಮೋದಿಯವರ ಫೋಟೋ ಮತ್ತು ಕ್ಯೂಆರ್ ಕೋಡ್ ಇದೆ. ಅದರಲ್ಲಿ “ದಯವಿಟ್ಟು ಸ್ಕ್ಯಾನ್ ಮಾಡಿ ಮತ್ತು ಸ್ಕ್ಯಾಮ್ ನೋಡಿ” ಎಂದು ಬರೆಯಲಾಗಿದೆ.
ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿಯ ಭ್ರಷ್ಟಾಚಾರ, ಸಿಎಜಿ ವರದಿಯಲ್ಲಿ ಹೈಲೈಟ್ ಆಗಿರುವ ಅಕ್ರಮಗಳು, ವಿವಿಧ ಮೂಲಸೌಕರ್ಯ ಯೋಜನೆಗಳಲ್ಲಿನ ಭ್ರಷ್ಟಾಚಾರ ಇತ್ಯಾದಿಗಳನ್ನು ವ್ಯಕ್ತಿಯೊಬ್ಬರು ವಿವರಿಸುವುದನ್ನು ವೀಡಿಯೊದಲ್ಲಿ ನೋಡಬಹುದು.
ವಿಡಿಯೀ ಮುಂದುವರೆದಂತೆ ಬಿಜೆಪಿಯನ್ನು ತಿರಸ್ಕರಿಸಿ ಇಂಡಿಯಾ ಬಣವನ್ನು ಬೆಂಬಲಿಸುವಂತೆ ಮತದಾರರಿಗೆ ಮನವಿ ಮಾಡಲಾಗಿದೆ.
ಡಿಎಂಕೆ ಪದಾಧಿಕಾರಿಗಳು ಈ ಪೋಸ್ಟರ್‌ಗಳನ್ನು ಹಾಕಿದ್ದಾರೆ.
2024ರ ಲೋಕಸಭಾ ಚುನಾವಣೆಯು ಏಪ್ರಿಲ್ 19ರಿಂದ ಜೂನ್ 1ರವರೆಗೆ ಏಳು ಹಂತಗಳಲ್ಲಿ ನಡೆಯಲಿದೆ. ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ. ತಮಿಳುನಾಡಿನ 39 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.