Wednesday, August 20, 2025

ಸತ್ಯ | ನ್ಯಾಯ |ಧರ್ಮ

ಇನ್ಮೇಲೆ ನಂದಿನಿ ಮಳಿಗೆಯಲ್ಲಿ ದೋಸೆ, ಇಡ್ಲಿ ಹಿಟ್ಟು ಲಭ್ಯ: ಇಂದು ಸಿಎಂ ಬಿಡುಗಡೆ

ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳ(ಕೆಎಂಎಫ್), ಇದೇ ಮೊದಲ ಬಾರಿಗೆ ‘ನಂದಿನಿ ಬ್ರ್ಯಾಂಡ್’ನ ಪ್ರೋಟೀನ್‌ಯುಕ್ತ ದೋಸೆ ಹಿಟ್ಟು ಮತ್ತು ಇಡ್ಲಿ ಹಿಟ್ಟನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.

ವಿಧಾನಸೌಧದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂದಿನಿ ಬ್ರ್ಯಾಂಡ್‌ನ ‘ರೆಡಿ ಟು ಕುಕ್’ ನಂದಿನಿ ವೇ ಪ್ರೋಟೀನ್‌ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಸಚಿವರಾದ ವೆಂಕಟೇಶ್ವರ, ಕೃಷ್ಣ ಬೈರೇಗೌಡ, ದಿನೇಶ್ ಗುಂಡೂರಾವ್, ಕೆ.ಎಂ.ಎಫ್. ಅಧ್ಯಕ್ಷ ಭೀಮಾನಾಯ್ಕ್, ವ್ಯವಸ್ಥಾಪಕ ನಿರ್ದೇಶಕ ಕೆ.ಶಿವಸ್ವಾಮಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಟ್ಟಿನ ವಿಶೇಷತೆ: ಕೆಎಂಎಫ್ ಬಿಡುಗಡೆ ಮಾಡಿರುವ ದೋಸೆ ಹಾಗೂ ಇಡ್ಲಿ ಹಿಟ್ಟಿನಲ್ಲಿ ಶೇ 5 ರಷ್ಟು ಪ್ರೋಟೀನ್‌ ಅಂಶವನ್ನು ಮಿಶ್ರ ಮಾಡಲಾಗಿದೆ.

ಬೆಂಗಳೂರು ನಗರದಲ್ಲಿ ಪ್ರಾಯೋಗಿಕವಾಗಿ ದೋಸೆ ಹಾಗೂ ಇಡ್ಲಿ ಹಿಟ್ಟನ್ನು ಎರಡು ವಿಧದ ಪ್ಯಾಕೆಟ್ ಗಳಲ್ಲಿ ಮಾರಾಟ ಮಾಡಲಾಗುತ್ತಿದೆ. 450 ಗ್ರಾಂ. ತೂಕದ ಪ್ಯಾಕೆಟ್‌ಗೆ ₹40 ಹಾಗೂ 900 ಗ್ರಾಂ. ತೂಕದ ಪ್ಯಾಕೆಟ್‌ಗೆ ₹80 ಗರಿಷ್ಠ ಮಾರಾಟ ದರ ನಿಗದಿಪಡಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page