Saturday, April 19, 2025

ಸತ್ಯ | ನ್ಯಾಯ |ಧರ್ಮ

ಡಾ.ಬಿ.ಆರ್. ಅಂಬೇಡ್ಕರ್ ವಸ್ತುಸಂಗ್ರಹಾಲಯ ಕಟ್ಟಡದ ಶಂಕುಸ್ಥಾಪನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಬೆಂಗಳೂರಿನಲ್ಲಿ ಕಂಚಿನ ಬುದ್ದ ಹಾಗೂ ಅಂಬೇಡ್ಕರ್‌ ಉದ್ಘಟಿಸಿದ್ದು, ನಂತರ ಡಾ.ಬಿ.ಆರ್‌ ಅಂಬೇಡ್ಕರ್‌ ವಸ್ತು ಸಂಗ್ರಹಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದಾರೆ.

ಶುಕ್ರವಾರದಂದು ಸದಾಶಿವನಗರದ ನಾಗಸೇಮ ವಿದ್ಯಾಲಯ ಆವರಣದಲ್ಲಿ ಆಯೋಜಿಸಲಾಗಿತ್ತು.ಈ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿಯವರು, ಕಂಚಿನ ಬುದ್ಧ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಮಂಟಪ ಉದ್ಘಾಟಿಸಿದ್ದಾರೆ. ತದನಂತರ ಡಾ.ಬಿ.ಆರ್.ಅಂಬೇಡ್ಕರ್ ವಸ್ತು ಸಂಗ್ರಹಾಲಯ ಕಟ್ಟಡ ನಿರ್ಮಾಣ ಕಾಮಗಾರಿ ಶುರು ಮಾಡುವುದಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಿದ್ದಾರೆ.

ಈ  ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ರಾಮದಾಸ್‌ ಅಠವಳೆ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ, ನಾಗಸೇನಾ ವಿದ್ಯಾಲಯದ ಅಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page