Saturday, March 14, 2026

ಸತ್ಯ | ನ್ಯಾಯ |ಧರ್ಮ

ಪೋಕ್ಸೋ : ಮತ್ತೆ ಜೈಲು ಪಾಲಾದ ಚಿತ್ರದುರ್ಗದ ಡಾ.ಶಿವಮೂರ್ತಿಗಳು

ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿಗಳು ಮತ್ತೆ ಜೈಲುಪಾಲಾಗಿದ್ದಾರೆ. ಇಂದು ಚಿತ್ರದುರ್ಗದ ಸೆಶನ್ಸ್ ಕೋರ್ಟ್ ನಲ್ಲಿ ಶರಣಾಗುವ ಮೂಲಕ ಡಾ.ಶಿವಮೂರ್ತಿಗಳು ಮತ್ತೆ ಜೈಲು ಸೇರುವಂತಾಗಿದೆ.

ಡಾ.ಶಿವಮೂರ್ತಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ದಾವಣಗೆರೆಯಿಂದ ಆಗಮಿಸಿದ ಮುರುಘಾ ಶ್ರೀ ಇಂದು ಚಿತ್ರದುರ್ಗದ 1ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಗೆ ಬಂದು ಶರಣಾಗಿದ್ದಾರೆ.

ಈ ವೇಳೆ ಶ್ರೀಗಳನ್ನು ನ್ಯಾಯಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಮುರುಘಾ ಶ್ರೀಗಳನ್ನು ಪೊಲೀಸ್ ವ್ಯಾನ್ ನಲ್ಲಿ ಜೈಲಿಗೆ ಕರೆದೊಯ್ಯಲು ಸಿದ್ಧತೆ ನಡೆಸಿದ್ದಾರೆ.

ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿತ್ತು. ಅಲ್ಲದೇ ಸಂತ್ರಸ್ತೆಯರನ್ನು ವಿಶೇಷ ಕೋರ್ಟ್ ನಲ್ಲಿ ವಿಚಾರಣೆ ನಡೆಸುವಂತೆ ಸೂಚಿಸಿತ್ತು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page