Thursday, September 11, 2025

ಸತ್ಯ | ನ್ಯಾಯ |ಧರ್ಮ

ಮಂಗಳೂರು: ಡಿಆರ್‌ಡಿಒ ಸಿಬ್ಬಂದಿ ಅನುಮಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲರ್ಪೆ ಗ್ರಾಮದ ತಮ್ಮ ನಿವಾಸದಲ್ಲಿ 24 ವರ್ಷದ ಡಿಆರ್‌ಡಿಒ ಸಿಬ್ಬಂದಿಯೊಬ್ಬರು ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಮೃತರನ್ನು ಮಂಗಳೂರು ನಗರಕ್ಕೆ ಸಮೀಪದಲ್ಲಿರುವ ಪುತ್ತೂರು ಸಮೀಪದ ಕಲ್ಲರ್ಪೆ ಗ್ರಾಮದ ನಿವಾಸಿ ಭರತ್ ಕಲ್ಲರ್ಪೆ ಎಂದು ಗುರುತಿಸಲಾಗಿದೆ.

ಬುಧವಾರ ತಡರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಭರತ್ ಎರಡು ತಿಂಗಳ ಹಿಂದೆ ಡಿಆರ್‌ಡಿಒ ಹೈದರಾಬಾದ್ ಘಟಕಕ್ಕೆ ತಾತ್ಕಾಲಿಕವಾಗಿ ಸೇರ್ಪಡೆಗೊಂಡಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.

ವಾರದ ಹಿಂದೆಯಷ್ಟೇ ಅವರು ಸ್ವಗ್ರಾಮಕ್ಕೆ ಮರಳಿದ್ದರು.‌ ಕೆಲಸಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದರೂ ಅಂಗೀಕಾರವಾಗಿರಲಿಲ್ಲ. ಸಂತ್ರಸ್ತನಿಗೆ ಗುರುವಾರ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಕರೆ ಬಂದಿದ್ದು, ಮರುದಿನ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆಂದು IANS ಸುದ್ದಿ ಸಂಸ್ಥೆ ವರದಿ ಮಾಡಿದೆ.

ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page