Home ಬ್ರೇಕಿಂಗ್ ಸುದ್ದಿ ಕೆಎಸ್ಆರ್ಟಿಸಿ ಡಿಪೊ ವ್ಯವಸ್ಥಾಪಕರ ಕಿರುಕುಳದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಚಾಲಕ

ಕೆಎಸ್ಆರ್ಟಿಸಿ ಡಿಪೊ ವ್ಯವಸ್ಥಾಪಕರ ಕಿರುಕುಳದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಚಾಲಕ

ಬೇಲೂರು : ಕೆಎಸ್ ಆರ್ ಟಿ ಸಿ ಡಿಪೊ ವ್ಯವಸ್ಥಾಪಕರ ಕಿರುಕುಳದಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಚಾಲಕ. ಬೇಲೂರು ಪ್ರಾದೇಶಿಕ ಕೆ ಎಸ್ ಆರ್ ಟಿ ಸಿ ಡಿಪೋ ದಲ್ಲಿ ಬಸ್ ಚಾಲಕ ಹಾಗು ನಿರ್ವಾಹಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೋಟಿಗನಹಳ್ಳಿ ಗ್ರಾಮದ ಹರೀಶ್ ಮುಂಜಾನೆ ಕೆಲಸಕ್ಕೆ ಆಗಮಿಸಿದ ವೇಳೆ ಡಿಪೋ ವ್ಯವಸ್ಥಾಪಕಿ ಶಹಜೀಯಬಾನು ಕೆಲಸ ನೀಡದೆ ಮಾನಸಿಕವಾಗಿ ಕಿರುಕುಳ ನೀಡಿದ ಹಿನ್ನಲೆಯಲ್ಲಿ ಡಿಪೋದಲ್ಲಿರುವ ವಿಶ್ರಾಂತಿ ಕೊಠಡಿಯಲ್ಲಿ ವಿಷ ಸೇವಿಸಿ ಒದ್ದಾಡುತ್ತಿದ್ದ ಇವರನ್ನು ಚಾಲಕರು ಹಾಗು ಸಿಬ್ಬಂದಿಗಳು ಕೂಡಲೆ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗೆ ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಡಿಪೋ ವ್ಯವಸ್ಥಾಪಕಿ ಶಹಜೀಯ ಭಾನು ವ್ಯಾಪಕ ಕಿರುಕುಳ ಬಸ್ ಗಳನ್ನು ಹೊರತೆಗೆಯದೆ ಪ್ರತಿಭಟನೆಗೆ ಇಳಿದ ಚಾಲಕರು

ಇವರು ಬೇಲೂರು ಡಿಪೋಗೆ ಬಂದ ನಂತರ ಚಾಲಕರ ಜೊತೆ ಸರಿಯಾದ ರೀತಿಯಲ್ಲಿ ಸ್ಪಂದಿಸದೆ ಉಡಾಫೆಯಿಂದ ವರ್ತಿಸುವುದು ಮತ್ತು ಯಾರು ಅವರ ವಿರುದ್ಧ ಇರುತ್ತಾರೆ ಅವರನ್ನು ಕೆಲಸದಿಂದ ವಜಾ ಮಾಡುತ್ತಾರೆ.ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದು ಇದರಿಂದಾಗಿ ನಮ್ಮ ಜೊತೆಗಾರ ವಿಷ ಕುಡಿಯುವ ಪರಿಸ್ಥಿತಿ ಬಂದಿದ್ದು ಕೂಡಲೆ ಅವರು ಇಲ್ಲಿಂದ ಬೇರೆಡೆಗೆ ಸ್ಥಳಾಂತರಿಸುವರೆಗೂ ನಾವು ಕೆಲಸ ಮಾಡುವುದಿಲ್ಲ ಎಂದು ಚಾಲಕರು ಪ್ರತಿಭಟನೆ ನಡೆಸಿದರು.

You cannot copy content of this page

Exit mobile version