Home ರಾಜ್ಯ ಕಲ್ಬುರ್ಗಿ ರಾಜ್ಯದ ಪರಿಸ್ಥಿತಿ ಅವಲೋಕಿಸಿ ಬರಗಾಲ ಪೀಡಿತ ಪ್ರದೇಶ ಘೋಷಣೆ: ಸಿಎಂ ಡಿ ಕೆ ಶಿವಕುಮಾರ್

ರಾಜ್ಯದ ಪರಿಸ್ಥಿತಿ ಅವಲೋಕಿಸಿ ಬರಗಾಲ ಪೀಡಿತ ಪ್ರದೇಶ ಘೋಷಣೆ: ಸಿಎಂ ಡಿ ಕೆ ಶಿವಕುಮಾರ್

0

ಕಲಬುರ್ಗಿ : “ಬರಗಾಲ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಲು ಕಾನೂನು ಚೌಕಟ್ಟಿದೆ. ರಾಜ್ಯದ ಎಲ್ಲಾ ಭಾಗಗಳ ಪರಿಸ್ಥಿತಿ ಪರಿಶೀಲಿಸಿ ನಂತರ ಘೋಷಣೆ ಮಾಡಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.

ಕಲಬುರಗಿ ಸರ್ಕಾರಿ ಅತಿಥಿ ಗೃಹದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಉತ್ತರಿಸಿದರು.

ಬರಗಾಲಕ್ಕೆ ಸಿಲುಕಿರುವ ಕಲ್ಯಾಣ ಕರ್ನಾಟಕದ ಭಾಗಕ್ಕೆ ಸರಕಾರದ ಕೊಡುಗೆ ಏನು ಎಂದು ಕೇಳಿದಾಗ, “ನಾನು ಬರಗಾಲ ಪರಿಸ್ಥಿತಿ ಅವಲೋಕಿಸಲು ಕಲ್ಯಾಣ ಕರ್ನಾಟಕ ಭಾಗಕ್ಕೆ ಬಂದಿದ್ದೇನೆ. ಇಲ್ಲಿನ ಜನರು ಮತ್ತು ಜನಪ್ರತಿನಿಧಿಗಳನ್ನು ಭೇಟಿ ಮಾಡಿದ್ದೇನೆ. ಇಲ್ಲಿನ ಪರಿಸ್ಥಿತಿಯ ಅವಲೋಕನಕ್ಕೆ ಸಭೆ ನಡೆಸುತ್ತಿದ್ದೇನೆ. ಅದೇ ರೀತಿ ಎರಡು ಮೂರು ದಿನ ಬಿಟ್ಟು ಬೆಳಗಾವಿಗೂ ಭೇಟಿ ನೀಡುತ್ತಿದ್ದೇನೆ” ಎಂದರು.

“ಸಮಸ್ಯೆ ಬಗೆಹರಿಸಬೇಕು ಎಂದು ಜನರು ಬೇಡಿಕೆಗಳನ್ನು ಮಂಡಿಸಿದ್ದಾರೆ. ಅವರ ಸಮಸ್ಯೆ ಆಲಿಸಲು ಹೊಸದಾಗಿ ಪ್ರಜಾಸೇವಾ ಇಲಾಖೆ ಸ್ಥಾಪಿಸಿ, ಸಚಿವರನ್ನು ನೇಮಕ ಮಾಡಿ, ಜನರ ಅರ್ಜಿಗಳನ್ನು ಪರಿಶೀಲಿಸಿ ಅವರಿಗೆ ಸಾಧ್ಯವಾದಷ್ಟು ನ್ಯಾಯ ಒದಗಿಸುವ ಕೆಲಸವನ್ನು ಸರ್ಕಾರ ಮಾಡುತ್ತದೆ” ಎಂದರು.

ಇದಕ್ಕೂ ಮೊದಲು ಮುಖ್ಯಮಂತ್ರಿಯವರು ಕಲಬುರ್ಗಿ ಸರಕಾರಿ ಅತಿಥಿ ಗೃಹದ ಆವರಣದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ರೈತರು ಕಬ್ಬಿನ ಜಲ್ಲೆ ಜತೆಗೆ ತಮ್ಮ ಅಹವಾಲುಗಳನ್ನು ನೀಡಿದರು. ಮಳೆ ಕೊರತೆ ಉಂಟಾಗಿದೆ, ಬರಗಾಲ ಪೀಡಿತ ಎಂದು ಘೋಷಣೆ ಮಾಡಿ ಎಂದು ರೈತರು ಮನವಿ ಮಾಡಿದರು. “ಈ ಪರಿಸ್ಥಿತಿಯನ್ನು ಕಣ್ಣಾರೆ ನೋಡಲೆಂದೇ ನಾನು ಇಲ್ಲಿಗೆ ಬಂದಿದ್ದೇನೆ. ನಿಮ್ಮ ಪರಿಸ್ಥಿತಿ ನನಗೆ ಅರ್ಥವಾಗುತ್ತದೆ” ಎಂದರು.

ರೈತರ ಸಾಲ ಮನ್ನಾ ವಿಚಾರ ಹಾಗೂ ತಮಿಳುನಾಡು, ಮಹಾರಾಷ್ಟ್ರಗಳಲ್ಲಿ ರೈತರ ಸಾಲ ಮನ್ನಾ ಮಾಡಿರುವ ಬಗ್ಗೆ ಕೇಳಿದಾಗ, “ಎಲ್ಲಿಯ ಸಾಲ, ಯಾವ ಸಾಲ ಎಂಬುದನ್ನು ಪರಿಶೀಲನೆ ಮಾಡೋಣ” ಎಂದರು.

You cannot copy content of this page

Exit mobile version