ರಾಯಚೂರು : ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ಮರವೊಂದಕ್ಕೆ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ಬಳಿ ರಾಗಿಹಳ್ಳಿ ಅರಣ್ಯ ಪ್ರದೇಶದ ಬಳಿ ನಡೆದಿದೆ.ಈ ವೇಳೆ ರಾಗಿಹಳ್ಳಿ ಅರಣ್ಯ ಪ್ರದೇಶದ ರಸ್ತೆಯ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನ ಮುಂಭಾಗದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತ ವಿದ್ಯಾರ್ಥಿಗಳನ್ನು ಕೇರಳ ಮೂಲದ ಸಾಹಹುಕ್ (28) ಹಾಗೂ ಅರ್ಶು (23) ಎಂದು ತಿಳಿದುಬಂದಿದೆ. ಗೊಟ್ಟಿಗೆರೆಯ ಟಿ ಜಾನ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ರಾತ್ರಿಪೂರ್ತಿ ಪಾರ್ಟಿ ಮಾಡಿ ತಡರಾತ್ರಿ ಕಾರು ಹತ್ತಿ ಹೊರಟ್ಟಿದ್ದಾರೆ.ಸದ್ಯ ಗಾಯಾಳುಗಳಾದ ದೇವನಾರಾಯಣ ಮತ್ತು ಸಾಹಿಲ್ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.