Thursday, February 5, 2026

ಸತ್ಯ | ನ್ಯಾಯ |ಧರ್ಮ

ಮೇಘಾಲಯದ ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ಡೈನಮೈಟ್ ಸ್ಫೋಟ: 10 ಕಾರ್ಮಿಕರು ಸಾವು

ಮೇಘಾಲಯದ ಪೂರ್ವ ಜೈಂಟಿಯಾ ಹಿಲ್ಸ್ ಜಿಲ್ಲೆಯ ಮೈನ್ಸಿಂಗಟ್–ಥಾಂಗ್ಸ್ಕೊ ಪ್ರದೇಶದಲ್ಲಿರುವ ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ಗುರುವಾರ ಡೈನಮೈಟ್ ಸ್ಫೋಟ ಸಂಭವಿಸಿ, ಕನಿಷ್ಠ 10 ಕಾರ್ಮಿಕರು ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಫೋಟದ ಬಳಿಕ ದೂರದ ಕಲ್ಲಿದ್ದಲು ಗಣಿ ಪ್ರದೇಶದಿಂದ 10 ಮಂದಿಯ ಶವಗಳನ್ನು ಹೊರತೆಗೆಯಲಾಗಿದೆ. ಸುಟ್ಟ ಗಾಯಗಳಿಂದ ಗಂಭೀರ ಸ್ಥಿತಿಯಲ್ಲಿದ್ದ ಒಬ್ಬ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗೆ ಶಿಲ್ಲಾಂಗ್‌ಗೆ ಸ್ಥಳಾಂತರಿಸಲಾಗಿದೆ ಎಂದು ಪೂರ್ವ ಜೈಂಟಿಯಾ ಹಿಲ್ಸ್ ಪೊಲೀಸ್ ವರಿಷ್ಠಾಧಿಕಾರಿ ವಿಕಾಶ್ ಕುಮಾರ್ ತಿಳಿಸಿದ್ದಾರೆ.

ಘಟನೆ ತಿಳಿಯುತ್ತಿದ್ದಂತೆ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ರಕ್ಷಿಸುವ ಕಾರ್ಯಾಚರಣೆ ಆರಂಭಿಸಿದ್ದಾರೆ. ಸ್ಫೋಟದ ನಿಖರ ಕಾರಣ ತಿಳಿದುಬಂದಿಲ್ಲ. ಅಕ್ರಮ ಗಣಿಗಾರಿಕೆ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page