ಬೆಂಗಳೂರಿನಾದ್ಯಂತ 45 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ಮುಖ್ಯ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್ , ಉಪ ಲೋಕಾಯುಕ್ತ ಕೆ,ಎನ್ ಫಣೀಂದ್ರ ನೇತೃತ್ವದಲ್ಲಿ ದಾಳಿ ನಡೆದಿದೆ.
ಅಧಿಕಾರಿಗಳು ಬೆಸ್ಕಾಂ ಹಾಗೂ ಜಲಮಂಡಳಿ ಕಚೇರಿಗಳ ಮೇಲೆ ಈ ದಾಳಿ ನಡೆಸಿದ್ದಾರೆ. ಬೆಸ್ಕಾಂ ನಲ್ಲಿ ಹಾಜರಾತಿ ಬುಕ್ ಸೇರಿ ಹಲವು ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ ಲೋಕಾಯುಕ್ತ ತಂಡ ಬೆಂಗಳೂರಿನಾದ್ಯಂತ 45 ಕಡೆ ದಾಳಿ ನಡೆಸಿದೆ ಎನ್ನಲಾಗಿದ್ದು, ಸದ್ಯ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.