Home ದೇಶ ಆಧಾರ್ ಮತ್ತು ಮತದಾರರ ಗುರುತಿನ ಚೀಟಿ ಲಿಂಕ್ ಮಾಡಲು ಹಸಿರು ನಿಶಾನೆ ತೋರಿಸಿದ ಚುನಾವಣಾ ಆಯೋಗ

ಆಧಾರ್ ಮತ್ತು ಮತದಾರರ ಗುರುತಿನ ಚೀಟಿ ಲಿಂಕ್ ಮಾಡಲು ಹಸಿರು ನಿಶಾನೆ ತೋರಿಸಿದ ಚುನಾವಣಾ ಆಯೋಗ

0

ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿ ಲಿಂಕ್ ಮಾಡಲು ಚುನಾವಣಾ ಆಯೋಗ ಗ್ರೀನ್ ಸಿಗ್ನಲ್ ನೀಡಿದೆ. 1950ರ ಜನತಾ ಪ್ರಾತಿನಿಧ್ಯ ಕಾಯ್ದೆಯ 326ನೇ ವಿಧಿ ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳ ಪ್ರಕಾರ ಚುನಾವಣಾ ಆಯೋಗವು EPIC ಜೊತೆ ಆಧಾರ್ ಕಾರ್ಡನ್ನು ಲಿಂಕ್ ಮಾಡಲು ನಿರ್ಧರಿಸಿದೆ.

ಯುಐಡಿಎಐ ಮತ್ತು ಕೇಂದ್ರ ಚುನಾವಣಾ ಆಯೋಗದ ತಜ್ಞರ ನಡುವೆ ತಾಂತ್ರಿಕ ಸಮಾಲೋಚನೆಗಳು ಶೀಘ್ರದಲ್ಲೇ ಪ್ರಾರಂಭವಾಗಲಿವೆ. ಸಿಇಸಿ ಜ್ಞಾನೇಶ್ ಕುಮಾರ್, ಚುನಾವಣಾ ಆಯುಕ್ತರಾದ ಡಾ. ಸುಖಬೀರ್ ಸಿಂಗ್ ಸಂಧು, ಡಾ. ವಿವೇಕ್ ಜೋಶಿ, ಕೇಂದ್ರ ಗೃಹ ಕಾರ್ಯದರ್ಶಿ, ಯುಐಡಿಎಐ ಶಾಸಕಾಂಗ ಇಲಾಖೆಯ ಕಾರ್ಯದರ್ಶಿ ಮತ್ತು ಕೇಂದ್ರ ಚುನಾವಣಾ ಆಯೋಗದ ತಾಂತ್ರಿಕ ತಜ್ಞರು ಇಂದು ಕೇಂದ್ರ ಚುನಾವಣಾ ಆಯೋಗದ ಕಚೇರಿಯಾದ ತಶ್ರವಣ ಸದನದಲ್ಲಿ ಸಭೆ ಸೇರಿದರು.

ಭಾರತದ ಸಂವಿಧಾನದ 326 ನೇ ವಿಧಿಯ ಪ್ರಕಾರ, ಭಾರತದ ನಾಗರಿಕನಿಗೆ ಮಾತ್ರ ಮತದಾನದ ಹಕ್ಕನ್ನು ನೀಡಲಾಗಿದೆ. ಆಧಾರ್ ಕಾರ್ಡ್ ವ್ಯಕ್ತಿಯ ಗುರುತನ್ನು ಮಾತ್ರ ದೃಢೀಕರಿಸುತ್ತದೆ.

ಸಂವಿಧಾನದ 326 ನೇ ವಿಧಿ, 1950 ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 23(4), 23(5), 23(6) ಮತ್ತು ಸುಪ್ರೀಂ ಕೋರ್ಟ್‌ನ ತೀರ್ಪಿನ ಅನುಸಾರ ಮಾತ್ರ ಮತದಾರರ ಗುರುತಿನ ಚೀಟಿಯನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲಾಗುವುದು ಎಂದು ನಿರ್ಧರಿಸಲಾಗಿದೆ. ಯುಐಡಿಎಐ ಮತ್ತು ಕೇಂದ್ರ ಚುನಾವಣಾ ಆಯೋಗ ಶೀಘ್ರದಲ್ಲೇ ಒಟ್ಟಾಗಿ ಒಂದು ಹೆಜ್ಜೆ ಮುಂದಿಡಲಿವೆ.

You cannot copy content of this page

Exit mobile version