Wednesday, September 10, 2025

ಸತ್ಯ | ನ್ಯಾಯ |ಧರ್ಮ

ಕಾರವಾರ ಶಾಸಕ ಸತೀಶ್ ಸೈಲ್‌ರನ್ನು ಬಂಧಿಸಿದ ‘ಇಡಿ’

ಕಾರವಾರದ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಅಕ್ರಮ ಅದಿರು ಸಾಗಾಟ ಪ್ರಕರಣದ ಅಡಿಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ವಿಚಾರಣೆಗೆ ಒಳಪಟ್ಟಿದ್ದ ಸತೀಶ್ ಸೈಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಇಡಿ ಅಧಿಕಾರಿಗಳ ಈ ನೋಟಿಸ್‌ಗೆ ಸ್ಪಂದಿಸದ ಕಾರಣ ಸತೀಶ್‌ ಸೈಲ್‌ರನ್ನು ಇಡಿ ಅಧಿಕಾರಿಗಳು ಬಂಧನಕ್ಕೊಳಪಡಿಸಿ ಬೆಂಗಳೂರಿಗೆ ಕರೆತಂದಿದ್ದಾರೆ.

ಈ ಹಿಂದೆ ಆಗಸ್ಟ್ 14 ರಂದು ಶಾಸಕರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿದಾಗ 1.68 ಕೋಟಿ ರೂ ನಗದು, 6.75 ಕೆಜಿ ಚಿನ್ನದ ಬಿಸ್ಕತ್ ಮತ್ತು ಆಭರಣಗಳು ಸೇರಿದಂತೆ 14.13 ಕೋಟಿ ರೂ ಅಕ್ರಮ ಆಸ್ತಿ ಪತ್ತೆಯಾಗಿತ್ತು. ಇದಲ್ಲದೆ, ಬ್ಯಾಂಕ್ ಖಾತೆಗಳಲ್ಲಿಯೂ ಸಹ ಅಕ್ರಮ ಆಸ್ತಿ ಪತ್ತೆಯಾಗಿದೆ 6. ಸತೀಶ್ ಸೈಲ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ.

ಇಡಿ ಅಧಿಕಾರಿಗಳು ಕಾರವಾರ, ಮುಂಬೈ, ದೆಹಲಿ ಮತ್ತು ಗೋವಾದಲ್ಲಿ ದಾಳಿ ನಡೆಸಿದ್ದಾರೆ.

ಸದ್ಯ ಇಡಿ ಅಧಿಕಾರಿಗಳು ಆರೋಗ್ಯ ತಪಾಸಣೆ ಮಾಡಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಇದರೊಂದಿಗೆ ಕರ್ನಾಟಕ ಕಾಂಗ್ರೆಸ್​​ನ ಮೂರನೇ ಶಾಸಕ ಅರೆಸ್ಟ್​ ಆದಂತಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page