Home Uncategorized ಅನಿಲ್‌ ಅಂಬಾನಿಯ 3 ಸಾವಿರ ಕೋಟಿ ಆಸ್ತಿಯನ್ನು ಮುಟ್ಟುಗೋಲು ಹಾಕಿದ ಇ.ಡಿ

ಅನಿಲ್‌ ಅಂಬಾನಿಯ 3 ಸಾವಿರ ಕೋಟಿ ಆಸ್ತಿಯನ್ನು ಮುಟ್ಟುಗೋಲು ಹಾಕಿದ ಇ.ಡಿ

ನವದೆಹಲಿ: ರಿಲಯನ್ಸ್‌ ಗ್ರೂಪ್‌ ಮುಖ್ಯಸ್ಥ ಅನಿಲ್ ಅಂಬಾನಿ  ಒಡೆತನದ ಸಮೂಹ ಸಂಸ್ಥೆಗಳ ವಿರುದ್ಧ ಕೇಳಿ ಬಂದಿದ್ದ ಅಕ್ರಮ ಹಣ ವರ್ಗಾವಣೆ ಆರೋಪದ ಬಗ್ಗೆ ನಡೆಯುತ್ತಿರುವ ತನಿಖೆಯ ಭಾಗವಾಗಿ ಸುಮಾರು 3 ಸಾವಿರ ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ(ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.

ಅನಿಲ್ ಅಂಬಾನಿಗೆ ಸೇರಿದ ಆಸ್ತಿಪಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಇಡಿ ನಾಲ್ಕು ತಾತ್ಕಾಲಿಕ ಆದೇಶಗಳನ್ನು ಹೊರಡಿಸಿದೆ ಎಂದು ಹೇಳಲಾಗಿದೆ. ಈ ಆಸ್ತಿಗಳ ಪೈಕಿ ಮುಂಬೈನ ಪಾಲಿ ಹಿಲ್ ನಲ್ಲಿರುವ ಅನಿಲ್ ಅಂಬಾನಿಯ ನಿವಾಸ ಹಾಗೂ ಅವರ ಒಡೆತನದ ಸಮೂಹ ಸಂಸ್ಥೆಗಳಿಗೆ ಸಂಬಂಧಿಸಿದ ಇನ್ನಿತರ ವಸತಿ ಹಾಗೂ ವಾಣಿಜ್ಯ ಆಸ್ತಿಗಳು ಸೇರಿವೆ ಎಂದು ಹೇಳಲಾಗುತ್ತಿದೆ.ದೆಹಲಿಯ ಮಹಾರಾಜ ರಂಜಿತ್ ಸಿಂಗ್ ಮಾರ್ಗದಲ್ಲಿರುವ ರಿಲಯನ್ಸ್ ಸೆಂಟರ್‌ಗೆ ಸಂಬಂಧಿಸಿದ ಜಮೀನು, ದಿಲ್ಲಿ, ನೋಯ್ಡಾ, ಘಾಝಿಯಾಬಾದ್, ಮುಂಬೈ, ಪುಣೆ, ಥಾಣೆ, ಹೈದರಾಬಾದ್, ಚೆನ್ನೈ ಹಾಗೂ ಪೂರ್ವ ಗೋದಾವರಿ ನಗರಗಳಲ್ಲಿರುವ ಇನ್ನಿತರ ಆಸ್ತಿಪಾಸ್ತಿಗಳನ್ನೂ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಈ ಎಲ್ಲಾ ಆಸ್ತಿಯ ಒಟ್ಟು ಮೌಲ್ಯ 3,084 ಕೋಟಿ ರೂ. ಎಂದು ಅಂದಾಜು ಮಾಡಲಾಗಿದೆ.2017 ಹಾಗೂ 2019ರ ಮಧ್ಯೆ ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್ ಅಡಿಯಲ್ಲಿರುವ ಸಂಸ್ಥೆಗಳಿಗೆ ಯೆಸ್‌ ಬ್ಯಾಂಕ್‌ 3,000 ಕೋಟಿ ರೂ. ಸಾಲ ನೀಡಿತ್ತು. ಆದರೆ ಈ ಸಾಲದ ಹಣವನ್ನು ಗ್ರೂಪ್‌ನ ಇತರ ಶೆಲ್‌ ಕಂಪನಿಗಳಿಗೆ (ಬೇನಾಮಿ ಕಂಪನಿ) ಅಕ್ರಮವಾಗಿ ವರ್ಗಾವಣೆ ಮಾಡಲಾಗಿತ್ತು. ಈ ಮೂಲಕ ಬ್ಯಾಂಕ್‌ಗಳು, ಷೇರುದಾರರು, ಹೂಡಿಕೆದಾರರು ಮತ್ತು ಇತರ ಸಾರ್ವಜನಿಕ ಸಂಸ್ಥೆಗಳನ್ನ ವಂಚಿಸುವ ಮೂಲಕ ಸಾರ್ವಜನಿಕ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದಾಗಿ ಇಡಿ ಆರೋಪ ಮಾಡಿದೆ.

You cannot copy content of this page

Exit mobile version