ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಹಾಗೂ ಅವರ ಸಹೋದರರ ನಿವಾಸದ ಮೇಲೆ ಇಡಿ (E.D) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಚಿತ್ರದುರ್ಗದ ತಮ್ಮ ನಿವಾಸದಲ್ಲಿ ಈ ದಾಳಿ ನಡೆಸಿದ್ದಾರೆ.
ಶುಕ್ರವಾರ ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಮತ್ತು ಅವರ ಸಹೋದರರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿರುವ 4 ನಿವಾಸಗಳ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ.
ಚಳ್ಳಕೆರೆ ಪಟ್ಟಣದಲ್ಲಿರುವ ಕೆ.ಸಿ.ವೀರೇಂದ್ರ ಪಪ್ಪಿ, ಕೆ.ಸಿ.ನಾಗರಾಜ, ಕೆ.ಸಿ.ತಿಪ್ಪೇಸ್ವಾಮಿ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ. ಇಡಿ ಅಧಿಕಾರಿಗಳು ಖಾಸಗಿ ವಾಹನಗಳಲ್ಲಿ ಆಗಮಿಸಿ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.