ಮುಡಾ ಪ್ರಕರಣದಲ್ಲಿ ‘ಇಡಿ’ ಎಂಟ್ರಿ; ಲೋಕಾಯುಕ್ತದ ಬೆನ್ನಲ್ಲೇ ಇಡಿ ಯಿಂದ ‘ಇಸಿಆರ್’ ದಾಖಲು

ನಿರೀಕ್ಷೆಯಂತೆ ಮುಡಾ ಪ್ರಕರಣದಲ್ಲಿ ಕೇಂದ್ರ ಜಾರಿ ನಿರ್ದೇಶನಾಲಯ ಎಂಟ್ರಿ ಕೊಟ್ಟಿದೆ. ಆ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ನಿವೇಶನ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಇಸಿಆರ್ ದಾಖಲಿಸಲಾಗಿದೆ.

ಕಳೆದ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ.ಪಾರ್ವತಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಸಧ್ಯ ದೂರುದಾರ ಸ್ನೇಹಮಯಿ ಕೃಷ್ಣ ನೀಡಿದಂತ ದೂರಿನ ಆಧಾರದ ಮೇಲೆ ಕೇಂದ್ರ ಜಾರಿ ನಿರ್ದೇಶನಾಲಯ ಸಂಸ್ಥೆ ತನ್ನ ಪ್ರಕರಣ ಮಾಹಿತಿ ವರದಿಯಲ್ಲಿ (ECIR) ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣವನ್ನು ಇಡಿ ದಾಖಲಿಸಿದೆ. ಲೋಕಾಯುಕ್ತ ತನಿಖೆಯ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ದಾಖಲಿಸಿದ ಈ ಕೇಸ್ ಕೂಡ ಸಿದ್ದರಾಮಯ್ಯ ಅವರಿಗೆ ತಲೆನೋವು ತರಿಸಿದೆ.

ಇದಷ್ಟೇ ಅಲ್ಲದೇ ಮನಿ ಲಾಂಡರಿಂಗ್ ತಡೆ ಕಾಯ್ದೆಯ (PMLA) ಸೆಕ್ಷನ್ಗಳಡಿಯಲ್ಲಿಯೂ ಜಾರಿ ನಿರ್ದೇಶನಾಲಯ ಕೇಸ್ ದಾಖಲಿಸಿ ತನಿಖೆ ನಡೆಸುವಂತಹ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು