Tuesday, July 23, 2024

ಸತ್ಯ | ನ್ಯಾಯ |ಧರ್ಮ

ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ ಜಾರಿ ನಿರ್ದೇಶನಾಲಯ (ಇಡಿ)

ಬೆಂಗಳೂರು: ವಾಲ್ಮೀಕಿ ಹಗರಣದ ಬಗ್ಗೆ ಇ.ಡಿ ನಡೆಸುತ್ತಿರುವ ತನಿಖೆ ಇದೀಗ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ನಡುವಿನ ಸಂಘರ್ಷದ ಹಾದಿಗೆ ಎಡೆಮಾಡಿಕೊಟ್ಟಿದೆ.

ಈ ನಡುವೆ ತಮ್ಮ ವಿರುದ್ದ ದಾಖಲಾಗಿರುವ ಎಫ್‌ಐಆರ್ ಪ್ರಶ್ನಿಸಿ ಇಡಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಅರ್ಜಿ ವಿಚಾರಣೆಯನ್ನು ಇಂದು ಮಾಧ್ಯಾಹ್ನನ ಹೈಕೋರ್ಟ್‌ ನ್ಯಾಯಾಪೀಠ ಕೈಗೆತ್ತಿಕೊಳ್ಳಲಿದೆ ಎನ್ನಲಾಗಿದೆ. ಇದೇ ವೇಳೆ ಅರ್ಜಿಯಲ್ಲಿ ಇಡಿ ಪರ ವಕೀಲರು ರಾಜ್ಯ ಸರ್ಕಾರದ ಕ್ರಮಕ್ಕೆ ತೀವ್ರ ಖಂಡಿಸಿದ್ದು, ಯಾವುದೇ ಪ್ರಾಥಮಿಕ ವಿಚಾರಣೆ ನಡೆಸಿದೇ ಅಧಿಕಾರಿಗಳ ವಿರುದ್ದ ಎಫ್‌ಐಆರ್ ದಾಖಲು ಮಾಡಲಾಗಿದೆ. ಅಧಿಕಾರಿಗಳ ಕೆಲಸಕ್ಕೆ ಅಡ್ಡಿಪಡಿಸಲು ಈ ರೀತಿ ತೊಂದರೆ ನೀಡುತ್ತಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೆ ಹಾಜರಾಗಿದ್ದ ಅಧಿಕಾರಿಗಳ ಬಳಿ ‘ಸಿಎಂ ಹಾಗೂ ಮಾಜಿ ಸಚಿವ ನಾಗೇಂದ್ರ ಹೆಸರು ಹೇಳಬೇಕು’ ಎಂದು ಒತ್ತಡ ಹೇರಿದ್ದ ಗಂಭೀರ ಆರೋಪ ಕೇಳಿ ಬಂದಿದೆ. ಈ ಸಂಬಂಧ ಇ.ಡಿ ಅಧಿಕಾರಿಗಳಾದ ಐಆರ್‌ಎಸ್‌ ಅಧಿಕಾರಿ ಮಿತ್ತಲ್‌, ಸಹಾಯಕ ನಿರ್ದೇಶಕ ಮುರಳಿ ಕಣ್ಣನ್‌ ವಿರುದ್ಧ ವಿಲ್ಸನ್‌ ಗಾರ್ಡನ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿತ್ತು.

Related Articles

ಇತ್ತೀಚಿನ ಸುದ್ದಿಗಳು