ದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಬ್ಬರು ಮುಖ್ಯಮಂತ್ರಿಗಳನ್ನು ಬಂಧಿಸಿದ್ದ ಇಡಿ ಅಧಿಕಾರಿ ಕಪಿಲ್ ರಾಜ್ ಸರ್ಕಾರಿ ಸೇವೆಗೆ ರಾಜೀನಾಮೆ ನೀಡಿದ್ದಾರೆ.
ಅವರ ರಾಜೀನಾಮೆ ಅಂಗೀಕರಿಸಲಾಗಿದೆ ಎಂದು ರಾಷ್ಟ್ರಪತಿ ಕಚೇರಿ ಪ್ರಕಟಿಸಿದೆ. ಅವರ ರಾಜೀನಾಮೆ ಜುಲೈ 17ರಿಂದ ಜಾರಿಗೆ ಬರಲಿದೆ. 45 ವರ್ಷದ ಕಪಿಲ್ ರಾಜ್, 2009 ರ ಬ್ಯಾಚ್ ಐಆರ್ಎಸ್ ಅಧಿಕಾರಿ. ಅವರು ED ಯಲ್ಲಿ 8 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.
ರಾಜೀನಾಮೆ ನೀಡುವ ಸಮಯದಲ್ಲಿ, ಅವರು ದೆಹಲಿ GST ಗುಪ್ತಚರ ವಿಭಾಗದ ಹೆಚ್ಚುವರಿ ಆಯುಕ್ತರಾಗಿದ್ದರು. ಕಳೆದ ವರ್ಷ ಜನವರಿಯಲ್ಲಿ ಭೂ ಹಗರಣ ಪ್ರಕರಣದಲ್ಲಿ ಆಗಿನ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಮತ್ತು ಅದೇ ವರ್ಷದ ಮಾರ್ಚ್‌ನಲ್ಲಿ ಮತ್ತೊಂದು ಪ್ರಕರಣದಲ್ಲಿ ಆಗಿನ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕಪಿಲ್ ರಾಜ್ ನೇತೃತ್ವದ ಇಡಿ ತಂಡಗಳು ಬಂಧಿಸಿದ್ದವು.
ವೈಯಕ್ತಿಕ ಕಾರಣಗಳಿಂದಾಗಿ ಅವರು ರಾಜೀನಾಮೆ ನೀಡಿರುವುದಾಗಿ ಅವರು ಘೋಷಿಸಿದರು.