Tuesday, January 27, 2026

ಸತ್ಯ | ನ್ಯಾಯ |ಧರ್ಮ

BREAKING NEWS: ಮುಡಾ ಕಛೇರಿ ಮೇಲೆ ಇಡಿ ಅಧಿಕಾರಿಗಳ ದಾಳಿ

ಮೈಸೂರಿನ ಮುಡಾ ಕಛೇರಿ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಇಂದು ಬೆಳಿಗ್ಗೆಯಿಂದಲೇ 20 ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಮೈಸೂರಿನ ಮುಡಾ ಕಚೇರಿಗೆ ಬಂದಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಹೆಸರಿನಲ್ಲಿ ನಡೆದಿದೆ ಎನ್ನಲಾದ ನಿವೇಶನ ಅವ್ಯವಹಾರ ಪ್ರಕರಣದ ಸಂಬಂಧ ದಾಖಲಾದ ದೂರು ಆಧರಿಸಿ ಇಡಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.

ಸ್ನೇಹಮಯಿ ಕೃಷ್ಣ ಅವರು ನೀಡಿದ ದೂರಿನ ಮೇರೆಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಡಾ ಹಗರಣ ರಾಜ್ಯ ಮಾತ್ರವಲ್ಲದೇ ರಾಷ್ಟ್ರವ್ಯಾಪ್ತಿಯಲ್ಲಿ ಭಾರಿ ಸುದ್ದಿಯಾಗಿತ್ತು. ಮುಡಾ ಹಗರಣದ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಯುವಂತೆ ಲೋಕಾಯುಕ್ತ ಅಧಿಕಾರಿಗಳಿಗೆ ಕೋರ್ಟ್ ಸೂಚನೆ ನೀಡಿತ್ತು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page