ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರ ಮನೆಯ ಮೇಲೆ ಬುಧವಾರ ಜಾರಿ ನಿರ್ದೇಶಾನಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸದಾಶಿವಘಡದಲ್ಲಿರುವ ಅವರ ನಿವಾಸದ ಮೇಲೆ ಬುಧವಾರ ಬೆಳ್ಳಂಬೆಳಿಗ್ಗೆಯೇ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಹಾಗೂ ತೆರಿಗೆ ವಂಚನೆ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ. ಈವರೆಗೆ ಜಾರಿ ನಿರ್ದೇಶಾನಲಯದ ಅಧಿಕಾರಿಗಳು ಯಾವುದೇ ಮಾಹಿತಿ ಬಿಡುಗಡೆ ಮಾಡಿಲ್ಲ.
ಸದಾಶಿವಘಡದ ಶಾಸಕರ ನಿವಾಸದೊಳಗೆ ಹೊರಗಿನಿಂದ ಪ್ರವೇಶ ನಿರ್ಬಂಧಿಸಲಾಗಿದೆ. ಖಾಸಗಿ ವಾಹನಗಳಲ್ಲಿ ಯಾವುದೇ ಸುಳಿವು ನೀಡದೇ ಧಿಡೀರನೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಧ್ಯಕ್ಕೆ ಕಾಗದ ಪತ್ರಗಳು ಮತ್ತು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.