Home ಬೆಂಗಳೂರು ಶಾಸಕ ಎನ್.ಎ.ಹ್ಯಾರೀಸ್ ಪುತ್ರ ಮೊಹಮ್ಮದ್ ನಲಪಾಡ್ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿ; ಬಿಟ್ ಕಾಯಿನ್...

ಶಾಸಕ ಎನ್.ಎ.ಹ್ಯಾರೀಸ್ ಪುತ್ರ ಮೊಹಮ್ಮದ್ ನಲಪಾಡ್ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿ; ಬಿಟ್ ಕಾಯಿನ್ ಹಗರಣದ ಶಂಕೆ

0

ಶಾಂತಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರೀಸ್ ಅವರಿಗೆ ಜಾರಿ ನಿರ್ದೇಶನಾಲಯ (ED) ದೊಡ್ಡ ಸಂಕಷ್ಟ ತಂದೊಡ್ಡಿದೆ. ಇಂದು ಮುಂಜಾನೆ ಇಡಿ ಅಧಿಕಾರಿಗಳು ಅವರ ನಿವಾಸ ಸೇರಿದಂತೆ ಹಲವು ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಶಾಸಕ ಹ್ಯಾರಿಸ್ ಅವರ ಪುತ್ರ, ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಅವರ ನಿವಾಸದ ಮೇಲೂ ಶೋಧ ಕಾರ್ಯ ನಡೆದಿದೆ. ನಗರದಲ್ಲಿ ಒಟ್ಟು 17 ಸ್ಥಳಗಳನ್ನು ಗುರಿಯಾಗಿಸಿಕೊಂಡು ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿರುವುದಾಗಿ ತಿಳಿದುಬಂದಿದೆ. ಪ್ರಕರಣದ ಹಿನ್ನೆಲೆ ಹಾಗೂ ವಶಪಡಿಸಿಕೊಂಡ ದಾಖಲೆಗಳ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗವಾಗಬೇಕಿದೆ.

ಶಾಸಕ ಹ್ಯಾರಿಸ್ ಅವರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದು, ಈ ದಾಳಿ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇಡಿ ಅಧಿಕಾರಿಗಳ ಶೋಧ ಕಾರ್ಯ ಮುಂದುವರಿದಿದ್ದು, ಮುಂದಿನ ಬೆಳವಣಿಗೆಗಳತ್ತ ಎಲ್ಲರ ಗಮನ ಕೇಂದ್ರೀಕೃತವಾಗಿದೆ.

You cannot copy content of this page

Exit mobile version