ಕೋಲ್ಕತ್ತಾ: ಮೊಬೈಲ್ ಗೇಮಿಂಗ್ ಅಪ್ಲಿಕೇಶನ್ ತನಿಖೆಗೆ ಸಂಬಂಧಿಸಿದಂತೆ 2002ರ ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ನಿಬಂಧನೆಗಳ ಅಡಿಯಲ್ಲಿ ಇಂದು ಕೋಲ್ಕತ್ತಾದ 6 ಪ್ರದೇಶಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಶೋಧ ಕಾರ್ಯಾಚರಣೆ ನಡೆಸಿದೆ.
ಈ ಕುರಿತು ಮಾಹಿತಿ ನೀಡಿರುವ ಇಡಿ, ಕಾರ್ಯಾಚರಣೆಯಲ್ಲಿ ಇದುವರೆಗೆ 7 ಕೋಟಿ ರೂಪಾಯಿ ನಗದು ಪತ್ತೆಯಾಗಿದ್ದು, ಮೊತ್ತದ ಲೆಕ್ಕ ಇನ್ನೂ ಪ್ರಗತಿಯಲ್ಲಿದೆ ಎಂದು ತಿಳಿಸಿದೆ.