Friday, July 12, 2024

ಸತ್ಯ | ನ್ಯಾಯ |ಧರ್ಮ

ದೆಹಲಿ ಮದ್ಯ ಹಗರಣ ಪ್ರಕರಣ: ಏಳನೇ ಪೂರಕ ಆರೋಪಪಟ್ಟಿ ಸಲ್ಲಿಸಿದ ಇಡಿ

ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ಪೂರಕ ಆರೋಪ ಪಟ್ಟಿಯನ್ನು ದೆಹಲಿ ವಿಚಾರಣಾ ನ್ಯಾಯಾಲಯ ಪರಿಗಣಿಸಿದೆ.

ಈ ಪ್ರಕರಣದಲ್ಲಿ ಇಡಿ ಏಳನೇ ಪೂರಕ ಚಾರ್ಜ್ ಶೀಟ್ ಸಲ್ಲಿಸಿದೆ. ಇತ್ತೀಚಿನ ಚಾರ್ಜ್‌ಶೀಟ್‌ನಲ್ಲಿ ಇಡಿ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ ವಿರುದ್ಧ ಆರೋಪ ಮಾಡಿದೆ. ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದಾರೆ.

ಮತ್ತೊಂದೆಡೆ, ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿ ಮೂರು ದಿನಗಳ ಕಾಲ ಕಸ್ಟಡಿಗೆ ತೆಗೆದುಕೊಳ್ಳುವುದರ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದಲ್ಲದೇ ದೆಹಲಿ ಮದ್ಯ ಹಗರಣ ಪ್ರಕರಣದಲ್ಲೂ ಜಾಮೀನು ಅರ್ಜಿ ಸಲ್ಲಿಸಲಾಗಿತ್ತು. ಈ ಎರಡು ಅರ್ಜಿಗಳ ವಿಚಾರಣೆ ಜುಲೈ 17ರಂದು ನಡೆಯಲಿದೆ.

Related Articles

ಇತ್ತೀಚಿನ ಸುದ್ದಿಗಳು