Home ಕ್ರೀಡೆ ಸಿಎಂಆರ್‌ಎಲ್ ಲಂಚ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ಗೆ ಇಡಿ ಸಮನ್ಸ್

ಸಿಎಂಆರ್‌ಎಲ್ ಲಂಚ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ಗೆ ಇಡಿ ಸಮನ್ಸ್

0

ತಿರುವನಂತಪುರಂ: ಕೊಚ್ಚಿನ್ ಮಿನರಲ್ಸ್ ಅಂಡ್ ರುಟೈಲ್ ಲಿಮಿಟೆಡ್ (CMRL) ಲಂಚ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದೆ. ಪ್ರಕರಣದ ವಿಚಾರಣೆ ಹಾಗೂ ಹೇಳಿಕೆ ದಾಖಲಿಸಿಕೊಳ್ಳಲು ಅಕ್ಟೋಬರ್ 23 ರಂದು ಕೊಚ್ಚಿಯಲ್ಲಿರುವ ಇಡಿ ಕಚೇರಿಗೆ ಖುದ್ದು ಹಾಜರಾಗುವಂತೆ ತನಿಖಾ ಸಂಸ್ಥೆ ಸೂಚಿಸಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (PMLA) ಸೆಕ್ಷನ್ 50ರ ಅಡಿಯಲ್ಲಿ ಈ ನೋಟಿಸ್ ನೀಡಲಾಗಿದೆ.

ಸಿಎಂಆರ್‌ಎಲ್ ಸಂಸ್ಥೆಯು ಯಾವುದೇ ಐಟಿ ಸೇವೆಗಳನ್ನು ಪಡೆಯದಿದ್ದರೂ ವಿಜಯನ್ ಅವರ ಪುತ್ರಿ ವೀಣಾ ವಿಜಯನ್ ಒಡೆತನದ ಎಕ್ಸಾಲಾಜಿಕ್ ಕಂಪನಿಗೆ ಕೋಟ್ಯಂತರ ರೂಪಾಯಿ ಅಕ್ರಮ ಹಣ ಪಾವತಿ ಮಾಡಿದೆ ಮತ್ತು ಹವಾಲಾ ಮಾರ್ಗದ ಮೂಲಕ ವರ್ಗಾಯಿಸಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯನ್, ಅವರ ಪುತ್ರಿ ವೀಣಾ ಹಾಗೂ ಅಳಿಯ, ಮಾಜಿ ಸಚಿವ ಪಿ.ಎ. ಮೊಹಮ್ಮದ್ ರಿಯಾಸ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೇರಳ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ವಿಜಯನ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆದರೆ ಸುಪ್ರೀಂ ಕೋರ್ಟ್ ಈ ಅರ್ಜಿಯ ತುರ್ತು ವಿಚಾರಣೆಗೆ ನಿರಾಕರಿಸಿದ್ದು, ದಸರಾ ರಜೆಯ ನಂತರ ಅಕ್ಟೋಬರ್ 26 ರಂದು ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.

ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಬಾಕಿ ಇರುವ ಬೆನ್ನಲ್ಲೇ ಇಡಿ ಸಮನ್ಸ್ ಜಾರಿಯಾಗಿರುವುದು ಕೇರಳ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

You cannot copy content of this page

Exit mobile version