ಮೈಸೂರು: ಕನಿಷ್ಠ ಎಂಟು ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿಯಾಗಲು ಕಾಯುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಶುಕ್ರವಾರ ಹೇಳಿದ್ದಾರೆ.
“ಸಿದ್ದರಾಮಯ್ಯ ಪೂರ್ಣ ಅವಧಿಗೆ ಮುಖ್ಯಮಂತ್ರಿಯಾಗಿರುವುದಿಲ್ಲ. ಅವರು ಯಾವುದೇ ಸಮಯದಲ್ಲಿ ರಾಜೀನಾಮೆ ನೀಡಬಹುದು” ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಸಿದ್ಧರಾಮಯ್ಯನವರು ತಮ್ಮ ಒಪ್ಪಂದದ ಅವಧಿ ಮುಗಿದಿದ್ದರೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ವಿರುದ್ಧ ತನ್ನ ಕೈಗೊಂಬೆಗಳನು ಬಳಸಿಕೊಂಡು ರಾಜಕೀಯ ಪಿತೂರಿ ನಡೆಸುತ್ತಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದರು.
“ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ತನ್ನದು ಪ್ರಮುಖ ಪಾತ್ರವಿದೆ ಎಂದು ಡಿ ಕೆ ಶಿವಕುಮಾರ್ ಹೇಳಿಕೊಳ್ಳುತ್ತಾರೆ, ಇದೇ ಕಾರಣಕ್ಕಾಗಿ ಅವರು ಮುಖ್ಯಮಂತ್ರಿಯಾಗಬೇಕಂದೂ ಬಯಸುತ್ತಿದ್ದಾರೆ, ಆದರೆ ಉಳಿದವರು ಸಿದ್ದರಾಮಯ್ಯ ರಾಜೀನಾಮೆ ನೀಡಿದರೂ ಸಹ ಶಿವಕುಮಾರ್ ಮುಖ್ಯಮಂತ್ರಿಯಾಗದಂತೆ ನೋಡಿಕೊಳ್ಳಲು ಭೋಜನ ಸಭೆಗಳನ್ನು ನಡೆಸುತ್ತಿದ್ದಾರೆ.” ಎಂದು ಅವರು ಹೇಳಿದರು.