Thursday, June 13, 2024

ಸತ್ಯ | ನ್ಯಾಯ |ಧರ್ಮ

ಪಂಚರಾಜ್ಯಗಳ ಚುನಾವಣೆಗೆ ಮುಹೂರ್ತ ಫಿಕ್ಸ್ ಮಾಡಲಿದೆಯಾ ಚುನಾವಣಾ ಆಯೋಗ!?

ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ, ಛತ್ತೀಸಘಡ ಹಾಗೂ ಮಿಜೋರಾಂ ಈ ಐದು ರಾಜ್ಯಗಳ ಸಾರ್ವತ್ರಿಕ ಚುನಾವಣಾ ದಿನಾಂಕವನ್ನು ಇಂದು ಚುನಾವಣಾ ಆಯೋಗ ಪ್ರಕಟಿಸುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಚುನಾವಣಾ ಆಯೋಗ ತಯಾರಿ ಮಾಡಿಕೊಂಡಿದ್ದು, ಪಂಚರಾಜ್ಯಗಳ ರಾಜಕೀಯ ಪಕ್ಷಗಳು ಚುನಾವಣಾ ತಯಾರಿಗೆ ಸಕಲ ಸಿದ್ಧತೆಗೆ ಮುಹೂರ್ತ ಫಿಕ್ಸ್ ಆಗಲಿದೆ.

ಇಂದು ಮಧ್ಯಾಹ್ನ 12 ಗಂಟೆಗೆ ಪತ್ರಿಕಾಗೋಷ್ಠಿ ಆರಂಭವಾಗಲಿದ್ದು, ಚುನಾವಣೆ ಪ್ರಕ್ರಿಯೆ ಕುರಿತಾದ ವಿಸ್ತೃತ ಮಾಹಿತಿ ನೀಡಲಾಗುವುದು. ಮೂಲಗಳ ಪ್ರಕಾರ, ನವೆಂಬರ್ ಎರಡನೇ ವಾರದಿಂದ ಡಿಸೆಂಬರ್ ಮೊದಲ ವಾರದ ನಡುವೆ ಯಾವುದೇ ಸಮಯದಲ್ಲಿ ಮತದಾನ ನಡೆಯಲಿದೆ.

ರಾಜಸ್ಥಾನ, ಮಧ್ಯಪ್ರದೇಶ, ಮಿಜೋರಾಂ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಛತ್ತೀಸ್‌ಗಢದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಈ 5 ರಾಜ್ಯಗಳಲ್ಲಿ, ಮಧ್ಯಪ್ರದೇಶವು ಪ್ರಸ್ತುತ ಭಾರತೀಯ ಜನತಾ ಪಕ್ಷದಿಂದ (ಬಿಜೆಪಿ) ಆಡಳಿತ ನಡೆಸುತ್ತಿದ್ದರೆ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಪಕ್ಷವು ಆಡಳಿತ ನಡೆಸುತ್ತಿದೆ. ತೆಲಂಗಾಣದಲ್ಲಿ ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಆಡಳಿತ ನಡೆಸುತ್ತಿದೆ. ಮಿಜೋರಾಂನಲ್ಲಿ ಪ್ರಸ್ತುತ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್‌ಎಫ್) ಎನ್.ಡಿ.ಎ ಕೂಟದ ಮಿತ್ರಪಕ್ಷವಾಗಿದೆ.

ಸಧ್ಯ ಮಧ್ಯಪ್ರದೇಶ, ತೆಲಂಗಾಣ, ರಾಜಸ್ಥಾನ, ಛತ್ತೀಸ್‌ಗಢ ಈ ನಾಲ್ಕೂ ವಿಧಾನಸಭೆಗಳ ಅಧಿಕಾರಾವಧಿಯು ಮುಂದಿನ ವರ್ಷಾರಂಭಕ್ಕೆ 2024 ರಲ್ಲಿ ಕೊನೆಗೊಳ್ಳುತ್ತದೆ. ಮಿಜೋರಾಂ ಒಂದೇ ರಾಜ್ಯದ ಅಧಿಕಾರವು ಈ ವರ್ಷದ ಡಿಸೆಂಬರ್‌ನಲ್ಲಿ ಕೊನೆಗೊಳ್ಳುತ್ತದೆ. ಆದರೆ ಚುನಾವಣಾ ಆಯೋಗ ಖರ್ಚು ವೆಚ್ಚಗಳನ್ನು ಕಡಿತಗೊಳಿಸಲು ಈ ಐದೂ ರಾಜ್ಯಗಳ ಚುನಾವಣೆಯನ್ನು ಒಂದೇ ಹಂತದಲ್ಲಿ ಮಾಡುವ ಬಗ್ಗೆ ಚಿಂತನೆ ನಡೆಸಿದೆ ಎನ್ನಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು