Friday, January 3, 2025

ಸತ್ಯ | ನ್ಯಾಯ |ಧರ್ಮ

ಚುನಾವಣೆ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ; ಪ್ರಹ್ಲಾದ ಜೋಷಿ

ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಚುನಾವಣೆ ಮೂಲಕ ನಡೆಸಲಾಗುವುದು ಎಂದು ಪ್ರಹ್ಲಾದ ಜೋಷಿ ಹೇಳಿದ್ದಾರೆ. ಇದರ ಸಂಪೂರ್ಣ ಉಸ್ತುವಾರಿಯನ್ನು ಮಾಜಿ ಮುಖ್ಯಮಂತ್ರಿ ಶಿವರಾಜ ಸಿಂಗ್ ಚೌಹಾಣ್ ಗೆ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಕುರಿತ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ಈಗಿನ ರಾಜ್ಯಾಧ್ಯಕ್ಷರು ಚುನಾವಣೆ ಮೂಲಕ ಆಯ್ಕೆಯಾದವರಲ್ಲ. ಪಕ್ಷದ ಹೈಕಮಾಂಡ್ ಅವರ ನೇಮಕ ಮಾಡಿದೆ. ಎಲ್ಲರ ಸಮ್ಮತಿ ಮೇರೆಗೆ ಅವರನ್ನು ನೇಮಕ ಮಾಡಲಾಗಿದೆ. ಆದರೆ ಈ ಮುಂದಿನ ಎಲ್ಲಾ ಹಂತದ ಪದಾಧಿಕಾರಿಗಳ ಆಯ್ಕೆಗೂ ಚುನಾವಣೆ ಮೂಲಕವೇ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಪ್ರಹ್ಲಾದ ಜೋಷಿ ತಿಳಿಸಿದ್ದಾರೆ

ಬಿಜೆಪಿ ಸದಸ್ಯತ್ವ ಅಭಿಯಾನ ಮುಗಿದ ಬಳಿಕ ಎಲ್ಲ ಹಂತಗಳಲ್ಲೂ ಪಕ್ಷದ ಪದಾಧಿಕಾರಿಗಳ ಚುನಾವಣೆ ನಡೆಯಲಿದೆ. ಈಗಾಗಲೇ ಬೂತ್ ಅಧ್ಯಕ್ಷರ ಆಯ್ಕೆ ನಡೆದಿದೆ. ಮಂಡಲ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ಆರಂಭವಾಗಿದೆ. ಅದೇ ರೀತಿ, ಪ್ರತಿ ರಾಜ್ಯದ ಬಿಜೆಪಿ ಅಧ್ಯಕ್ಷರ ಚುನಾವಣೆಗೆ ಸಂಬಂಧಿಸಿದಂತೆ ಒಬ್ಬೊಬ್ಬರನ್ನು ಮೇಲ್ವಿಚಾರಕರನ್ನಾಗಿ ನೇಮಕ ಮಾಡಲಾಗಿದೆ. ಕರ್ನಾಟಕದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಮೇಲ್ವಿಚಾರಕರಾಗಿದ್ದಾರೆ ಎಂದು ಅವರು ಹೇಳಿದರು.

ಮಂಗಳೂರಿನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಹ್ಲಾದ ಜೋಷಿ ಅವರು ರಾಜ್ಯ ಆಡಳಿತ ಪಕ್ಷದ ಮೇಲೂ ಹರಿಹಾಯ್ದರು. ಮುಖ್ಯಮಂತ್ರಿ ಸೇರಿ ಅನೇಕ ಸಚಿವರ ವಿರುದ್ಧ ಭ್ರಷ್ಟಾಚಾರ, ಅತ್ಮಹತ್ಯೆಗೆ ಪ್ರಚೋದನೆಯ, ಕಿರುಕುಳದಂತಹ ಗಂಭೀರ ಆರೋಪಗಳಿವೆ. ಈಶ್ವರಪ್ಪ ಹಾಗೂ ಯಡಿಯೂರಪ್ಪ ಪ್ರಕರಣದಲ್ಲಿ ಆಡಿದ ಮಾತುಗಳನ್ನ ಸಿಎಂ ಒಮ್ಮೆ ನೆನಪು ಮಾಡಿಕೊಳ್ಳಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page