Home ಇನ್ನಷ್ಟು ಸತ್ಯ ಶೋಧ ಭಾರತ ಹಿಂದೂ ರಾಷ್ಟ್ರವಲ್ಲ ಎಂಬುದು ಚುನಾವಣಾ ಫಲಿತಾಂಶದಿಂದ ನಿಜವಾಯಿತು: ಅಮರ್ತ್ಯ ಸೇನ್

ಭಾರತ ಹಿಂದೂ ರಾಷ್ಟ್ರವಲ್ಲ ಎಂಬುದು ಚುನಾವಣಾ ಫಲಿತಾಂಶದಿಂದ ನಿಜವಾಯಿತು: ಅಮರ್ತ್ಯ ಸೇನ್

0

ಕೋಲ್ಕತ್ತ: ಭಾರತವು ಹಿಂದೂ ರಾಷ್ಟ್ರ ಅಲ್ಲ ಎಂಬುವುದನ್ನು ಈ ಬಾರಿಯ ಲೋಕಸಭಾ ಚುನಾವಣೆಯು ನಿಜ ಮಾಡಿದೆ ಎಂದು ನೊಬೆಲ್ ‌ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಹೇಳಿದರು.

ಅಮೆರಿಕದಿಂದ ಕೋಲ್ಕತ್ತಗೆ ಬುಧವಾರ ಸಂಜೆ ಆಗಮಿಸಿದ ವೇಳೆ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಈ ಹಿಂದಿನ ಅವಧಿಯಲ್ಲಿ ವಿಚಾರಣೆಯಿಲ್ಲದೆ ಜನರನ್ನು ಜೈಲಿಗೆ ಹಾಕಲಾಗುತ್ತಿತ್ತು. ಜೊತೆಗೆ ಶ್ರೀಮಂತರು–ಬಡವರ ನಡುವಿನ ಅಂತರವನ್ನು ಹೆಚ್ಚಿಸುವಂತಹ ನೀತಿಗಳು ಜಾರಿಗೊಂಡಿದ್ದವು. ಅವು ಈಗಲೂ ಮುಂದುವರೆದಿವೆ ಎಂದು ಬೇಸರವ್ಯಕ್ತಪಡಿಸಿದರು.

‘ನಾನು ಚಿಕ್ಕವನಿದ್ದಾಗ ಬ್ರಿಟಿಷರು ನನ್ನ ಚಿಕ್ಕಪ್ಪಂದಿರು, ಸೋದರ ಸಂಬಂಧಿಗಳನ್ನು ವಿಚಾರಣೆಯಿಲ್ಲದೆ ಜೈಲಿಗೆ ಹಾಕುತ್ತಿದ್ದರು. ಇದರಿಂದ ಭಾರತ ಮುಕ್ತವಾಗಲಿದೆ ಎಂದು ಆಶಿಸಿದ್ದೆವು. ಆದರೆ ಕಾಂಗ್ರೆಸ್ ಆಡಳಿತದಲ್ಲಿಯೂ ಅದು ಮುಂದುವರಿದಿತ್ತು. ಆದರೆ, ಪ್ರಸಕ್ತ ಸರ್ಕಾರದ ಅವಧಿಯಲ್ಲಿ ಇದು ಅವ್ಯಾಹತವಾಗಿ ನಡೆಯುತ್ತಿದೆʼ ಎಂದರು.

ಹೊಸ ಸಂಪುಟದ ಖಾತೆಗಳಲ್ಲಿ ಅಂತಹ ಬದಲಾವಣೆಗಳೇನು ಆಗಿಲ್ಲ. ಹಿಂದೆ ಇದ್ದವರೆ ಈಗ ಮುಂದುವರಿದಿದ್ದಾರೆ. ಅಲ್ಪಸ್ವಲ್ಪ ಬದಲಾವಣೆ ಮಾಡಿದರೂ ರಾಜಕೀಯವಾಗಿ ಪ್ರಬಲರಾಗಿರುವವರು ಇನ್ನೂ ಪ್ರಬಲರಾಗಿಯೇ ಉಳಿದಿದ್ದಾರೆ ಎಂದರು.

ತುಂಬಾ ಹಣ ವ್ಯಯಿಸಿ ರಾಮಮಂದಿರ ನಿರ್ಮಿಸಲಾಯಿತು. ಭಾರತವನ್ನು ಹಿಂದೂ ರಾಷ್ಟ್ರ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗಿತ್ತು. ಆದರೆ, ಪೈಜಾಬಾದ್ ಕ್ಷೇತ್ರದಲ್ಲಿ ಇದು ಮಹಾತ್ಮ ಗಾಂಧಿ, ರವೀಂದ್ರನಾಥ ಟ್ಯಾಗೋರ್ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ದೇಶದಲ್ಲಿ ನಡೆಯಬಾರದಿತ್ತು. ಭಾರತ ಜಾತ್ಯಾತೀತ ರಾಷ್ಟ್ರವಾಗಿದ್ದು, ಅದರ ನೈಜ ಗುರುತನ್ನು ಬದಲಾಯಿಸುವ ಯತ್ನಗಳು ನಿರಂತರವಾಗಿ ಈ ದೇಶದಲ್ಲಿ ನಡೆಯುತ್ತಿರುತ್ತವೆ ಎಂದು ಆಶಿಸಿದರು.

You cannot copy content of this page

Exit mobile version