Home Uncategorized ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ – ಸಿಎಂ ಸಿದ್ದರಾಮಯ್ಯ

ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ – ಸಿಎಂ ಸಿದ್ದರಾಮಯ್ಯ

0

ಕಾರವಾರ : ರಾಜ್ಯದಲ್ಲಿ (Karnataka) ಸ್ಥಳೀಯ ಸಂಸ್ಥೆ ಚುನಾವಣೆಗಳು ಅನೇಕ ವರ್ಷಗಳಿಂದ ಬಾಕಿ ಉಳಿದಿದ್ದು, ಯಾವಾಗ ಎಲೆಕ್ಷನ್ ನಡೆಯುತ್ತೆ ಎಂಬ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ (Cm siddaramaiah ) ಉತ್ತರ ದೊರೆತಿದೆ.

ಜೂನ್ ತಿಂಗಳ ಅಂತ್ಯದೊಳಗೆ ರಾಜ್ಯದಲ್ಲಿ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅಂಕೋಲಾ ತಾಲೂಕಿನ ಮಂಜುಗುಣಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಗಂಗಾವಳಿ ಸೇತುವೆಯನ್ನು ಲೋಕಾರ್ಪಣೆಗೊಳಿಸಿ ಭಾನುವಾರ ಮಾತನಾಡಿದ ಅವರು, ರಾಜ್ಯದ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆಗಳ ಚುನಾವಣೆಯನ್ನು ಒಂದೇ ಹಂತದಲ್ಲಿ ನಡೆಸುವ ಯೋಜನೆ ರೂಪಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಆಡಳಿತ ವ್ಯವಸ್ಥೆಯನ್ನು ಬಲಪಡಿಸುವ ದೃಷ್ಟಿಯಿಂದ ಚುನಾವಣೆಗಳನ್ನು ಸಮಯಕ್ಕೆ ಸರಿಯಾಗಿ ನಡೆಸುವುದು ಸರ್ಕಾರದ ಬದ್ಧತೆಯಾಗಿದೆ. ಜನತೆಯ ಪಾಲ್ಗೊಳ್ಳುವಿಕೆಯಿಂದ ಶಕ್ತಿಶಾಲಿ ಸ್ಥಳೀಯ ಆಡಳಿತ ನಿರ್ಮಾಣ ಸಾಧ್ಯವೆಂದು ಅವರು ಅಭಿಪ್ರಾಯಪಟ್ಟರು.

ಇನ್ನು, ಗೋಕರ್ಣ ವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ಬೇಡಿಕೆ ಇದೆ. ಚುನಾವಣೆಗಳು ಮುಗಿದ ನಂತರ ಗೋಕರ್ಣವನ್ನು ಪಟ್ಟಣ ಪಂಚಾಯಿತಿ ಯಾಗಿ ಮೇಲ್ದರ್ಜೆಗೇ ಮೇಲ್ದರ್ಜೆಗೇರಿಸಲಾಗುವುದು ಎಂದು ಭರವಸೆ ನೀಡಿದರು. ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಪುನರ್‌ಪ್ರಸ್ತಾವ ಸಲ್ಲಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

You cannot copy content of this page

Exit mobile version