ಹಾಸನ: ನಗರದ ಮಲಬಾರ್ ಗೋಲ್ಡ್ ಆಭರಣ ಮಳಿಗೆಯ ಮಹಡಿಯಿಂದ ಬಿದ್ದು ಎಲೆಕ್ಟ್ರೀಷಿಯನ್ ಒಬ್ಬರು ಮೃತಪಟ್ಟಿದ್ದಾರೆ. ಆಲೂರು ತಾಲೂಕು ಮಗ್ಗೆ ನಿವಾಸಿ ರವೀಂದ್ರ (52) ಮೃತ ವ್ಯಕ್ತಿ. ಇವರು ಆಭರಣ ಮಳಿಗೆಯಲ್ಲಿ ಎಲೆಕ್ಟ್ರೀಷಿಯನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಇಂದು ಸಂಜೆ ಎರಡನೇ ಮಹಡಿಯ ಮೇಲೆ ವಿದ್ಯುತ್ ಸಂಬಂಧಿತ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ತಲೆಗೆ ತೀವ್ರ ಪೆಟ್ಟಾಗಿ ಪ್ರಜ್ಞಾ ಶೂನ್ಯರಾದ ಅವರನ್ನು ಹಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಮೃತರಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ. ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.