ಬಳ್ಳಾರಿ: ರಾಜ್ಯದಲ್ಲಿ ಭಾರತ ಐಕ್ಯತಾ ಯಾತ್ರೆಯು ಬಳ್ಳಾರಿಯಲ್ಲಿ ಸಾಗುತ್ತಿದ್ದು, ಯಾತ್ರೆಯ ವೇಳೆ ನಾಲ್ವರಿಗೆ ವಿದ್ಯುತ್ ಸ್ಪರ್ಶಿಸಿರುವ ಘಟನೆ ನಡೆದಿದೆ.
ಮಾಹಿತಿ ಪ್ರಕಾರ ಯಾತ್ರೆಯಲ್ಲಿ ಭಾಗವಹಿಸಿದ್ದವರೊಬ್ಬರು ಕಾಂಗ್ರೆಸ್ ಬಾವುಟವಿರುವ ಕಬ್ಬಿಣದ ರಾಡ್ ಇಡಿದು ಸಾಗುತ್ತಿರುವ ವೇಳೆ, ಬಾವುಟ ಹಿಡಿದ ವ್ಯಕ್ತಿಯನ್ನು ಸೇರಿದಂತೆ ನಾಲ್ವರಿಗೆ ವಿದ್ಯುತ್ ಸ್ಪರ್ಶಿಸಿದೆ ಎಂದು ತಿಳಿದುಬಂದಿದೆ.
ಈ ಕುರಿತು ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಮಾಹಿತಿ ನೀಡಿದ್ದು, ವಿದ್ಯುತ್ ಸ್ಪರ್ಶಿಸಿದ ಸಂತ್ರಸ್ತರಿಗೆ ಸ್ಥಳದಲ್ಲಿ ಆಂಬ್ಯುಲೆನ್ಸ್‌ನಲ್ಲಿ ವೈದ್ಯರು ಚಿಕಿತ್ಸೆ ನೀಡಿದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿಸಿದರು.