Home ದೇಶ ನೇಪಾಳ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ ವ್ಯವಸ್ಥೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮನವಿ

ನೇಪಾಳ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ ವ್ಯವಸ್ಥೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮನವಿ

0

ಬೆಂಗಳೂರು : ನೇಪಾಳದಲ್ಲಿ ಸಂಭವಿಸಿರುವ ಹಠಾತ್‌ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯ ನಾಗರಿಕರಿಗೆ ನೆರವು ಹಾಗೂ ಅಗತ್ಯ ಮಾಹಿತಿ ಒದಗಿಸಲು ತುರ್ತು ಸಹಾಯವಾಣಿ ಸಂಖ್ಯೆಗಳು ಪ್ರಕಟಿಸಲಾಗಿದೆ.

ಪ್ರವಾಹದಿಂದಾಗಿ ನೇಪಾಳದ ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಭಾರತೀಯ ನಾಗರಿಕರೂ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ನೆರವು ಅಥವಾ ಮಾಹಿತಿಯ ಅಗತ್ಯವಿರುವವರು ತಕ್ಷಣ ಕೆಳಗಿನ ಸಹಾಯವಾಣಿ ಸಂಖ್ಯೆಗಳ ಮೂಲಕ ಸಂಪರ್ಕಿಸುವಂತೆ ಗೃಹ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್‌ ಖರ್ಗೆ ಮನವಿ ಮಾಡಿದ್ದಾರೆ.

ತುರ್ತು ಸಹಾಯವಾಣಿ ಸಂಖ್ಯೆಗಳು:

  • +977 985 131 6807
  • +977 970 910 7500
  • +977 981 032 6117
    ಈ ಮೂರು ಸಂಖ್ಯೆಗಳಿಗೂ WhatsApp ಮೂಲಕವೂ ಸಂಪರ್ಕಿಸಬಹುದಾಗಿದೆ.

ನೇಪಾಳದಲ್ಲಿರುವ ಭಾರತೀಯ ನಾಗರಿಕರು ಅಥವಾ ಅವರ ಕುಟುಂಬದ ಸದಸ್ಯರಿಗೆ ಯಾವುದೇ ರೀತಿಯ ನೆರವು, ಮಾಹಿತಿ ಅಥವಾ ಸಂಪರ್ಕದ ಅಗತ್ಯವಿದ್ದಲ್ಲಿ ವಿಳಂಬ ಮಾಡದೆ ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವಂತೆ ಸಚಿವರು ತಿಳಿಸಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿರುವ ಭಾರತೀಯ ನಾಗರಿಕರ ಸುರಕ್ಷತೆ ಹಾಗೂ ಅಗತ್ಯ ನೆರವು ಪಡೆಯಲು ಈ ತುರ್ತು ಸಂಪರ್ಕ ವ್ಯವಸ್ಥೆಯನ್ನು ಬಳಸಿಕೊಳ್ಳುವಂತೆ ಪ್ರಿಯಾಂಕ್‌ ಖರ್ಗೆ ಮನವಿ ಮಾಡಿದ್ದಾರೆ.

You cannot copy content of this page

Exit mobile version