ಶ್ರೀನಗರದಲ್ಲಿ ಎನ್‌ ಕೌಂಟರ್: ಬಂ ದೂಕುಧಾರಿ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಿರಂತರ ಗುಂಡಿನ ಚಕಮಕಿ ನಡೆಯುತ್ತಿದೆ. ಈ ಎನ್‌ಕೌಂಟರ್‌ನಲ್ಲಿ ಇಲ್ಲಿಯವರೆಗೆ ಒಬ್ಬ ಬಂದೂಕುಧಾರಿ ಸಾವನ್ನಪ್ಪಿದ್ದಾನೆ.

ಸೋಮವಾರ ಸಂಜೆ ಹರ್ವಾನ್‌ನ ದಚಿಗಂ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಮತ್ತು ಸ್ಥಳೀಯ ಪೊಲೀಸರು ಜಂಟಿಯಾಗಿ ಸರ್ಚ್ ನಡೆಸಿದರು.

ಪರಿಣಾಮವಾಗಿ, ಮಂಗಳವಾರ ಮುಂಜಾನೆ ಬಂದೂಕುಧಾರಿಗಳು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದರು. ಗುಂಡಿನ ಚಕಮಕಿಯಲ್ಲಿ ಒಬ್ಬ ಭಯೋತ್ಪಾದಕ ಹತನಾದ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಜಮ್ಮು ಪೊಲೀಸರು ತಿಳಿಸಿದ್ದಾರೆ. ಆ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯ ಮುಂದುವರಿದಿದೆ. ಇನ್ನೂ ಇಬ್ಬರು ಅಥವಾ ಮೂವರು ಉಗ್ರರು ಅಲ್ಲಿರುವ ಸಾಧ್ಯತೆ ಇದೆ.

Related Articles

ಇತ್ತೀಚಿನ ಸುದ್ದಿಗಳು