Wednesday, September 10, 2025

ಸತ್ಯ | ನ್ಯಾಯ |ಧರ್ಮ

ಜಮ್ಮು ಕಾಶ್ಮೀರ: ಕುಲ್ಗಾಮ್ ನಲ್ಲಿ ಇಬ್ಬರು ಶಂಕಿತ ಉಗ್ರರ ಎನ್‌ಕೌಂಟರ್, ಇಬ್ಬರು ಯೋಧರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರದಲ್ಲಿ ಶಂಕಿತ ಭಯೋತ್ಪಾದಕರ ಮೇಲೆ ನಡೆದ ಎನ್‌ಕೌಂಟರ್ ಕಾಳಗದಲ್ಲಿ ಇಬ್ಬರು ಶಂಕಿತ ಉಗ್ರರು ಹತರಾಗಿದ್ದಾದೆ. ಇದೇ ಸಂದರ್ಭದಲ್ಲಿ ಗಾಯಗೊಂಡ 3 ಯೋಧರ ಪೈಕಿ ಇಬ್ಬರು ಹುತಾತ್ಮರಾಗಿದ್ದಾರೆ.

ಕುಲ್ಗಾಮ್‌ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಗುಡ್ಡರ್‌ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರಿರುವ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯ ನಡೆಸುವಾಗ ಉಗ್ರರು ದಾಳಿ ನಡೆಸಿದ್ದಾರೆ.

ಈ ವೇಳೆ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಭಾರತೀಯ ಸೇನೆ, ಜಮ್ಮು-ಕಾಶ್ಮೀರ ಪೊಲೀಸರು ಮತ್ತು ಸಿಆರ್‌ಪಿಎಫ್‌ ಪಡೆ ಜಂಟಿ ಕಾರ್ಯಾಚರಣೆ ನಡೆಸಿವೆ. ಗಾಯಗೊಂಡ ಸೈನಿಕರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ, ಕಾರ್ಯಾಚರಣೆ ಮುಂದುವರಿದಿದೆ ಎಂದು ಸೇನೆ ತಿಳಿಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page