Home ರಾಜ್ಯ ಚಾಮರಾಜನಗರ ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್ – ಗುಂಡಿನ ದಾಳಿ 3 ಮಂದಿ ಮೃತ್ಯು

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್ – ಗುಂಡಿನ ದಾಳಿ 3 ಮಂದಿ ಮೃತ್ಯು

ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ಅಕ್ರಮ ಬೇಟೆ ವೇಳೆ ನಡೆದ ಗುಂಡಿನ ದಾಳಿಯಲ್ಲಿ 3 ಮಂದಿ ಬೇಟೆಗಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿಗೆ ವನ್ಯಪ್ರಾಣಿಗಳನ್ನು ಅಕ್ರಮವಾಗಿ ಬೇಟೆಯಾಡಿ ಮಾಂಸ ಬೇರ್ಪಡಿಸುತ್ತಿರುವ ಕುರಿತು ಮಾಹಿತಿ ಲಭಿಸಿದೆ. ಸ್ಥಳಕ್ಕೆ ದೌಡಾಯಿಸಿದ ಸಿಬ್ಬಂದಿ ಬೇಟೆಗಾರರನ್ನು ಹಿಡಿಯಲು ಮುಂದಾದಾಗ ಅವರು ಗುಂಡಿನ ದಾಳಿ ನಡೆಸಿದ್ದಾರೆ. ಆತ್ಮರಕ್ಷಣೆಗಾಗಿ ಅರಣ್ಯ ಇಲಾಖೆಯವರು ಪ್ರತಿದಾಳಿ ನಡೆಸಿದಾಗ ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಹನೂರು ತಾಲೂಕಿನ ತೋಮಿಯರ್ ಪಾಳ್ಯ ಗ್ರಾಮದ ಅಂತೋಣಿಸ್ವಾಮಿ, ಪೀಟರ್, ಕುಮಾರ್ ಎಂದು ಗುರುತಿಸಲಾಗಿದೆ.

ಮೃತ ಮೂವರ ಶವಗಳನ್ನು ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಹೆಚ್ಚಿನ ವಿವರಗಳು ಹೊರಬೀಳಲಿವೆ.

ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆದಿದೆ. ಸಂಪೂರ್ಣ ಮಾಹಿತಿಯನ್ನು ಅರಣ್ಯ ಇಲಾಖೆಯವರು ನೀಡಬೇಕಿದೆ.

You cannot copy content of this page

Exit mobile version